Ather Rizta: 160 Km ರೇಂಜ್.. ರೂ.1.21 ಲಕ್ಷ.. ಎಥರ್ ರಿಜ್ಟಾ ಖರೀದಿಸಬೇಕೇ.. ಇಲ್ಲಿದೆ ಉಪಯುಕ್ತ ವಿವರ

Ather Rizta: ನೀವು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಎಥರ್ ರಿಜ್ಟಾ' ಬೆಸ್ಟ್ ಚಾಯ್ಸ್ ಆಗಲಿದೆ.

Aug 14, 2026 - 11:52
Ather Rizta: 160 Km ರೇಂಜ್.. ರೂ.1.21 ಲಕ್ಷ.. ಎಥರ್ ರಿಜ್ಟಾ ಖರೀದಿಸಬೇಕೇ.. ಇಲ್ಲಿದೆ ಉಪಯುಕ್ತ ವಿವರ

ಎಥರ್ ರಿಜ್ಟಾ (Ather Rizta) ಜನಪ್ರಿಯ ಫ್ಯಾಮಿಲಿ ಸ್ಕೂಟರ್ ಆಗಿ ಹೊರಹೊಮ್ಮಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಎಥರ್ ರಿಜ್ಟಾ' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಇದರ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ: ಇದು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.1.21 ಲಕ್ಷದಿಂದ ರೂ.1.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 'ರಿಜ್ಟಾ ಎಸ್' ಹಾಗೂ 'ರಿಜ್ಟಾ ಝಡ್' ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ವಿನ್ಯಾಸ & ಬಣ್ಣಗಳು: ಈ ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಟರ್ನ್ ಸಿಗ್ನಲ್ ಲೈಟ್‌ಗಳು, ಎಲ್ಇಡಿ ಟೈಲ್‌ಲೈಟ್‌ & ಅಲಾಯ್ ವೀಲ್‌ಗಳನ್ನು ಪಡೆದಿದೆ. ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಮತ್ತು ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285  ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 

ಕಾರ್ಯಕ್ಷಮತೆ: ನೂತನ 'ಎಥರ್ ರಿಜ್ಟಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.9 ಹಾಗೂ 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಿಂಗಲ್-ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 

ವೈಶಿಷ್ಟ್ಯಗಳು: ಇದು ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್ ಸೇರಿ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗದುಕೊಂಡು ಹೋಗಲು 34 ಲೀ.ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಪಡೆದಿದೆ.

ಸುರಕ್ಷತೆ: ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.