BIG NEWS: ಆಗಸ್ಟ್ 13ಕ್ಕೆ ಕರ್ನಾಟಕ ಬಂದ್
August 13 Karnataka Bandh: ತಮಿಳುನಾಡಿಗೆ ನೀರು ಹರಿಸಲು 'ಕಾವೇರಿ ನೀರು ನಿಯಂತ್ರಣ ಸಮಿತಿ' ರಾಜ್ಯಕ್ಕೆ ಸೂಚಿಸಿದೆ. ಇದನ್ನು ವಿರೋಧಿಸಿ, ಆಗಸ್ಟ್ 13 ಗುರುವಾರದಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಲು 'ಕಾವೇರಿ ನೀರು ನಿಯಂತ್ರಣ ಸಮಿತಿ' ರಾಜ್ಯಕ್ಕೆ ಸೂಚಿಸಿದೆ. ಇದನ್ನು ವಿರೋಧಿಸಿ, ಆಗಸ್ಟ್ 13 ಗುರುವಾರದಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದು, 'ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ನಡೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದ್ದಾರೆ.
'ಯಾರು ಬಂದ್‌ಗೆ ವಿರೋಧಿಸಬೇಡಿ. ನೈತಿಕ ಬೆಂಬಲ ಹೇಳಬೇಡಿ. ಎಲ್ಲ ರೈತರು ಭಾಗವಹಿಸಿ' ಎಂದು ಅವರು ಮನವಿ ಮಾಡಿದ್ದಾರೆ.
ಇವತ್ತು ಹೋರಾಟದ ರೂಪುರೇಶೆಗಳನ್ನು ನಿರ್ಧರಿಸಲು ನಡೆದ ಸಭೆಯಲ್ಲಿ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಹಾಗೂ ಸಾ.ರಾ.ಗೋವಿಂದು ಸೇರಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.