ಆ.13ಕ್ಕೆ ಕರ್ನಾಟಕ ಬಂದ್.. ಸ್ಪಷ್ಟನೆ
Karnataka Bandh: ಆ.13ಕ್ಕೆ ಕರ್ನಾಟಕ ಬಂದ್ ನಡೆಯಲಿದ್ದು, ಆ ಬಗ್ಗೆ ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಲು 'ಕಾವೇರಿ ನೀರು ನಿಯಂತ್ರಣ ಸಮಿತಿ' ರಾಜ್ಯಕ್ಕೆ ಸೂಚಿಸಿದ್ದು, ಇದನ್ನು ವಿರೋಧಿಸಿ ಆಗಸ್ಟ್ 13 ಗುರುವಾರದಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಆದರೀಗ ರಾಜ್ಯದಲ್ಲಿ ಉತ್ತಮವಾದ ಮಳೆಯಾಗುತ್ತಿದೆ. ಹಲವು ಸಂಘಟನೆಗಳು ಬೆಂಬಲ ವಾಪಾಸ್ ಪಡೆಯುತ್ತಿದ್ದು, ಬಂದ್ ರದ್ದಾಗಲಿದೆ ಎಂದು ಹೇಳಲಾಗುತ್ತಿದೆ.
ಸದ್ಯ, ಈ ಎಲ್ಲಾ ಗೊಂದಲಗಳಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ತೆರೆ ಎಳೆದಿದ್ದಾರೆ. ಅಂದು 'ಕರ್ನಾಟಕ ಬಂದ್' ನಡೆಸುವುದು ನಿಶ್ಚಿತ. 2000ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದ್ದಾರೆ.
ಇಂದು ಅತ್ತಿಬೆಲೆಯಲ್ಲಿ 'ಮೇಕೆದಾಟು ಯೋಜನೆ' ಅನುಷ್ಠಾನಕ್ಕೆ ಒತ್ತಾಯಿಸಿ, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.