ಆ.21 ರಿಂದ ಟಾಕ್ಸಿಕ್ ಟಿಕೆಟ್ ಬುಕ್ಕಿಂಗ್ ಓಪನ್

Toxic: ಸ್ಟಾರ್ ಯಶ್ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' ಟಿಕೆಟ್ ಬುಕ್ಕಿಂಗ್‌ಗೆ ಡೇಟ್ ಫಿಕ್ಸ್ ಆಗಿದೆ. ಆ.21 ರಿಂದ ಪ್ರೇಕ್ಷಕರು ಮುಂಗಡವಾಗಿ ಕಾಯ್ದಿರಿಬಹುದು.

Aug 19, 2026 - 11:31
Aug 21, 2026 - 07:30
ಆ.21 ರಿಂದ ಟಾಕ್ಸಿಕ್ ಟಿಕೆಟ್ ಬುಕ್ಕಿಂಗ್ ಓಪನ್

ರಾಕಿಂಗ್ ಸ್ಟಾರ್ ಯಶ್ (Yash) ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' (Toxic) ಟಿಕೆಟ್ ಬುಕ್ಕಿಂಗ್‌ಗೆ ಡೇಟ್ ಫಿಕ್ಸ್ ಆಗಿದ್ದು, ಆ.21 ರಿಂದ ಪ್ರೇಕ್ಷಕರು ಮುಂಗಡವಾಗಿ ಕಾಯ್ದಿರಿಬಹುದು. ಈ ಬಗ್ಗೆ ಚಿತ್ರತಂಡವು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. 

ಆಗಸ್ಟ್ 26 ರಂದು 'ಟಾಕ್ಸಿಕ್' ವಿಶ್ವದಾದ್ಯಂತ ರಿಲೀಸ್ ಆಗಲಿದೆ. ವಿಶ್ವಾದ್ಯಂತ 12,000 ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಈಗಾಗಲೇ ಟ್ರೇಲರ್ ಹಿಟ್ ಆಗಿದ್ದು, ಯಶ್ ಅಬ್ಬರ ಜೋರಾಗಿದೆ. ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಲಿವುಡ್‌ಗೆ ಪೈಪೋಟಿ ನೀಡುವಂತೆ ನಿರ್ಮಾಣಗೊಂಡಿದೆ. 

ಇದು ಬಿಗ್ ಬಜೆಟ್ ಸಿನಿಮಾವಾಗಿದ್ದು, ಗೀತು ಮೋಹನ್‌ದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.