ಆ.7ಕ್ಕೆ ಅಯೋಗ್ಯ-2 ರಾಜ್ಯಾದ್ಯಂತ ಬಿಡುಗಡೆ

Ayogya-2: ಬಹುನಿರೀಕ್ಷಿತ ಕನ್ನಡ ಸಿನಿಮಾ 'ಅಯೋಗ್ಯ-2' ಇದೇ ಆಗಸ್ಟ್ 7 ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಬುಕ್‌ಮೈಶೋನಲ್ಲಿ ಟಿಕೆಟ್ ಬುಕ್ ಮಾಡಬಹುದು.

Aug 5, 2026 - 17:04
ಆ.7ಕ್ಕೆ ಅಯೋಗ್ಯ-2 ರಾಜ್ಯಾದ್ಯಂತ ಬಿಡುಗಡೆ

ಬಹುನಿರೀಕ್ಷಿತ ಕನ್ನಡ ಸಿನಿಮಾ ಅಯೋಗ್ಯ-2 (Ayogya-2), ಇದೇ ಆಗಸ್ಟ್ 7 ಶುಕ್ರವಾರದಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಸದ್ಯ ಬುಕ್‌ಮೈಶೋನಲ್ಲಿ ಟಿಕೆಟ್ ಬುಕ್ ಮಾಡಬಹುದು. 

ಈ ಚಿತ್ರದ ಮುದ್ದು ಮುದ್ದು ಪುಟ್ಟಲಕ್ಷ್ಮಿ.. ಅಣ್ಣ ಬಂದ್ರೆ.. ಹಾಗೂ ಮಿಲ್ಕಿ ಬ್ಯೂಟಿ.. ಹಾಡುಗಳು ಹಿಟ್ ಆಗಿದ್ದು, ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದು 2018 ರಲ್ಲಿ ಬಿಡುಗಡೆಗೊಂಡ 'ಅಯೋಗ್ಯ' ಸಿನಿಮಾದ ಸೀಕ್ವೆಲ್ ಆಗಿದೆ. 

ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಹಾಗೂ ಸಾಧು ಕೋಕಿಲ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶನ ಎಸ್.ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳಿದ್ದು, 'ಎಸ್​ವಿಸಿ ಫಿಲಂಸ್' ಬ್ಯಾನರ್‌ನಡಿ ಎಂ.ಮುನೇಗೌಡ ನಿರ್ಮಿಸಿದ್ದಾರೆ. 

ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಮಾಸ್ತಿ ಉಪ್ಪಾರಹಳ್ಳಿ ಸಂಭಾಷಣೆ ಬರೆದಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ ವರ್ಕ್ ಮಾಡಿದ್ದು, ಸುರೇಶ್ ಆರ್ಮುಗಂ ಸಂಕಲನಕಾರರಾಗಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.