Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಏರಿಕೆ, ನಾಳೆಯಿಂದಲೇ ಜಾರಿ.. ಎಷ್ಟಾಗಿದೆ?

Dakshina Kannada: ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಆಟೋರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡಲಾಗಿದೆ.

Aug 31, 2026 - 17:47
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಏರಿಕೆ, ನಾಳೆಯಿಂದಲೇ ಜಾರಿ.. ಎಷ್ಟಾಗಿದೆ?

ದಕ್ಷಿಣ ಕನ್ನಡ: ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ, ಆಟೋರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡಲಾಗಿದೆ. 

ಪರಿಷ್ಕೃತ ದರದಂತೆ, ಪ್ರತಿ 1.5 ಕಿಲೋಮೀಟರ್‌ಗೆ ದೂರಕ್ಕೆ ನಿಗದಿಯಾಗಿದ್ದ ಕನಿಷ್ಠ ಆಟೋ ಮೀಟರ್‌ ದರವನ್ನು ರೂ.35 ರಿಂದ ರೂ.40ಕ್ಕೆ ಹೆಚ್ಚಳ ಮಾಡಲಾಗಿದೆ. 

ಆ ನಂತರದ ಪ್ರತಿ ಕಿಲೋಮೀಟರ್‌ ದೂರಕ್ಕೆ ರೂ.20 ನಿಗದಿಪಡಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗಿನ ಜಾವ 5 ಗಂಟೆವರೆಗೆ ನಿಗದಿತ ಮೀಟರ್‌ ದರಕ್ಕಿಂತ ಒಂದೂವರೆ ಪಟ್ಟು ಹೆಚ್ಚು ಬಾಡಿಗೆ ಇರಲಿದೆ. 

ಪರಷ್ಕೃತ ದರ ನಾಳೆಯಿಂದ (ಸೆ.1) ಅಧಿಕೃತವಾಗಿ ಜಾರಿಯಾಗಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.