Vivekananda PU College: ವಿವೇಕಾನಂದ ಪಿಯು ಕಾಲೇಜಿನಲ್ಲಿ ಆಯುಧ ಪೂಜೆ

Vivekananda PU College: ವಿವೇಕಾನಂದ ಪದವಿ-ಪೂರ್ವ ಕಾಲೇಜಿನಲ್ಲಿ, ಈಚೆಗೆ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

Oct 26, 2026 - 17:45
Vivekananda PU College: ವಿವೇಕಾನಂದ ಪಿಯು ಕಾಲೇಜಿನಲ್ಲಿ ಆಯುಧ ಪೂಜೆ

ಪುತ್ತೂರು: ವಿವೇಕಾನಂದ ಪದವಿ-ಪೂರ್ವ ಕಾಲೇಜಿನಲ್ಲಿ, ಈಚೆಗೆ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ವಿಘ್ನೇಶ್ ಭಟ್ ಪಡ್ನೂರು ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. 

ಕಾಲೇಜಿನ ಬಸ್‌ಗಳು, ಪ್ರಯೋಗಾಲಯದ ಉಪಕರಣಗಳು ಮತ್ತು ಕಚೇರಿಯ ಪರಿಕರಗಳಿಗೆ ಪೂಜೆ ಸಲ್ಲಿಸಿ, ಅವುಗಳ ಮಹತ್ವವನ್ನು ಗೌರವಿಸಲಾಯಿತು. 

ಸಂಪ್ರದಾಯ, ಶ್ರದ್ಧೆ ಮತ್ತು ಕಾಯಕದ ಮಹತ್ವವನ್ನು ಸಾರುವ ಈ ಆಚರಣೆಯು ಕಾಲೇಜಿನ ವಾತಾವರಣದಲ್ಲಿ ಭಕ್ತಿ & ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿಬಿಂಬಿಸಿತು.

ಈ ವೇಳೆ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಹಾಜರಿದ್ದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.