ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಮೂರನೇ ಆರೋಪಿ ಅರೆಸ್ಟ್‌

ಮಹಾರಾಷ್ಟ್ರದ  ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ.

Oct 14, 2024 - 05:29
ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಮೂರನೇ ಆರೋಪಿ ಅರೆಸ್ಟ್‌

ಮುಂಬೈ: ಮಹಾರಾಷ್ಟ್ರದ  ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ. ಮೂವರು ಶೂಟರ್‌ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯಗೆ ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ.ಬಂಧಿತ ಆರೋಪಿಯನ್ನು ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ. ಈತ ಬಾಬಾ ಸಿದ್ದಿಕಿ ಹತ್ಯೆಯಲ್ಲಿ ಸಂಚುಕೋರ ಎನ್ನಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದರು. ಬಂಧಿತರನ್ನು ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿತ್ತು.ಬಂಧಿತ ಆರೋಪಿಗಳಿಂದ ಎರಡು ಪಿಸ್ತೂಲ್‌ಗಳು ಮತ್ತು 28 ಸಜೀವ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.