Bajaj Freedom 125: 'ಬಜಾಜ್ ಫ್ರೀಡಂ 125' ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ದಿನಬಳಕೆಗೂ ಬೆಸ್ಟ್ ಚಾಯ್ಸ್ ಮಾಡೆಲ್ ಆಗಿದೆ. ನೀವು ಈ ಮೋಟಾರ್‌ಸೈಕಲ್‌ನ್ನು ಖರೀದಿಸಬೇಕೇ.. ಹಾಗಾದರೆ, ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಇದು ಕೈಗೆಟುಕುವ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.1.04 ಲಕ್ಷದಿಂದ ರೂ.1.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎನ್‌ಜಿ04 ಡ್ರಮ್, ಎನ್‌ಜಿ04 ಡ್ರಮ್ ಎಲ್ಇಡಿ ಮತ್ತು ಎನ್‌ಜಿ04 ಡಿಸ್ಕ್ ಎಲ್ಇಡಿ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ಈ ಬೈಕ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್ ಲ್ಯಾಂಪ್ & ಸಿಂಗಲ್-ಪೀಸ್ ಸೀಟ್‌ನ್ನು ಪಡೆದಿದೆ. ಸೈಬರ್ ವೈಟ್, ಎಬೊನಿ ಬ್ಯ್ಲಾಕ್, ಪ್ಯೂಟರ್ ಗ್ರೇ ಮತ್ತು ಕೆರಿಬಿಯನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,340 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಫ್ರೀಡಂ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124.58-ಸಿಸಿ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮೋಡ್‌ನಲ್ಲಿ 130 ಕಿ.ಮೀ ಹಾಗೂ ಸಿಎನ್‌ಜಿ ಮೋಡ್‌ನಲ್ಲಿ 200 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಇದು ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಮೊಬೈಲ್ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ನಾನಾ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ನ್ನು ಪಡೆದಿದೆ.