ಬಳ್ಳಾರಿ: ಡಿಸಿಎಂ ಡಾ.ಜಿ.ಪರಮೇಶ್ವರ ಬರ ಪರಿಶೀಲನೆ
Ballari: ಬಳ್ಳಾರಿ ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಬರ ಪರಿಶೀಲನೆ ನಡೆಸಿದರು.
ಬಳ್ಳಾರಿ: ತಾಲೂಕಿನ ಬರಪೀಡಿತ ಹಲಕುಂದಿ ಗ್ರಾಮದ ತೊಗರಿ ಬಿತ್ತನೆ ಮಾಡಿರುವ ಜಮೀನಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಭೇಟಿ ನೀಡಿ, ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಮಳೆ ಕೊರತೆಯಿಂದ ತೊಗರಿ ಬೆಳೆ ಒಣಗಿ ಸಂಪೂರ್ಣ ಹಾನಿಗೀಡಾಗಿರುವುದನ್ನು ಅವರು ವೀಕ್ಷಿಸಿದರು. ಆ ಬಳಿಕ ರೈತರೊಂದಿಗೆ ಸಮಾಲೋಚನೆ ನಡೆಸಿ, ಬೆಳೆ ನಷ್ಟ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ರೈತ ದುರ್ಗಣ್ಣ, ಒಂದು ಎಕರೆ ತೊಗರಿ ಬೆಳೆಯಲು ಈವರೆಗೆ ಸುಮಾರು ರೂ.15 ಸಾವಿರ ವೆಚ್ಚವಾಗಿದೆ. ಸಮಯಕ್ಕೆ ಸರಿಯಾಗಿ ಉತ್ತಮ ಮಳೆಯಾಗಿದ್ದರೆ ಪ್ರತಿ ಎಕರೆಗೆ 5 ರಿಂದ 6 ಕ್ವಿಂಟಲ್‌ವರೆಗೆ ತೊಗರಿ ಇಳುವರಿ ನಿರೀಕ್ಷಿಸಲಾಗಿತ್ತು. ಆದರೆ, ಈ ಬಾರಿ ಮಳೆ ಕೊರತೆಯಿಂದಾಗಿ ಬೆಳೆ ಒಣಗಿ ಸಂಪೂರ್ಣ ಹಾನಿಗೀಡಾಗಿದೆ. ಯಾವುದೇ ಇಳುವರಿ ಬಾರದ ಹಿನ್ನೆಲೆ, ಬೆಳೆಗಾರರಿಗೆ ಭಾರಿ ನಷ್ಟವಾಗಿದೆ. ಆದ್ದರಿಂದ ಸರ್ಕಾರ ರೈತರ ಬೆಳೆ ನಷ್ಟವನ್ನು ಪರಿಗಣಿಸಿ, ಸೂಕ್ತ ಪರಿಹಾರ ಒದಗಿಸಬೇಕು ಎಂದು ಉಪಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.