ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಡಿಸೆಂಬರ್ 31ರ ಸಂಜೆ 8 ರಿಂದ ಜನವರಿ 1ರ ಬೆಳಗ್ಗೆ 2ರವರೆಗೆ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಿದ್ದಾರೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವು ಕಡೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಪಾರ್ಕಿಂಗ್ ನಿಷೇಧ ಹಾಗೂ ಪರ್ಯಾಯ ಮಾರ್ಗಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ವಿವರವಾದ ಮಾಹಿತಿ ಇಲ್ಲಿದೆ.

Dec 29, 2025 - 14:12
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ
New Year

ಬೆಂಗಳೂರಿನಲ್ಲಿ ಹೊಸವರ್ಷದ ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ ಹೇರಲಾಗಿದ್ದು, ಪಾರ್ಕಿಂಗ್ ವ್ಯವಸ್ಥೆ ಮತ್ತು ಪರ್ಯಾಯ ಮಾರ್ಗಗಳನ್ನು ಟ್ರಾಫಿಕ್ ಅಡ್ವೈಸರಿ ಹಂಚಿಕೊಂಡಿದೆ.

ಡಿಸೆಂಬರ್ 31ರ ರಾತ್ರಿ 8 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿ 02 ಗಂಟೆಯವರೆಗೆ ಪೊಲೀಸ್ ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರ ಎಲ್ಲಾ ವಾಹನಗಳ ಸಂಚಾರವನ್ನು ಕೆಳಕಂಡ ರಸ್ತೆಗಳಲ್ಲಿ ನಿಷೇಧಿಸಲಾಗಿದೆ

  • ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ
  • ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ವರೆಗೆ
  • ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
  • ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
  • ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ ವೃತ್ತ) ವರೆಗೆ
  • ರೆಸ್ಟ್ ಹೌಸ್ ರಸ್ತೆ: ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ
  • ರೆಸಿಡೆನ್ಸಿ ಕ್ರಾಸ್ ರಸ್ತೆ: ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ ರಸ್ತೆ ಜಂಕ್ಷನ್‌ವರೆಗೆ (ಶಂಕರ್ ನಾಗ್ ಚಿತ್ರಮಂದಿರದವರೆಗೆ)

    ನಿರ್ಬಂಧಿತ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

    ಡಿಸೆಂಬರ್ 31ರ ರಾತ್ರಿ 08 ಗಂಟೆಯ ನಂತರ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಲು ಪೊಲೀಸ್ ಇಲಾಖೆ ಸೂಚಿಸಿದೆ

    • ಕ್ವೀನ್ಸ್ ವೃತ್ತದಿಂದ ಹಲಸೂರು ಕಡೆಗೆ ಹೋಗುವ ವಾಹನಗಳು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ – ಬಿ.ಆರ್.ವಿ ಜಂಕ್ಷನ್ – ಕಬ್ಬನ್ ರಸ್ತೆ ಮೂಲಕ ವೆಬ್ಸ್ ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಬಹುದು
    • ಹಲಸೂರಿನಿಂದ ಕಂಟೋನ್ಮೆಂಟ್ ಕಡೆಗೆ ಹೋಗುವ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ – ಡಿಕನ್ಸನ್ ರಸ್ತೆ ಮೂಲಕ ಕಬ್ಬನ್ ರಸ್ತೆ ಸೇರಬೇಕು
    • ಕಾಮರಾಜ್ ರಸ್ತೆ: ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ ವಾಹನ ನಿಲುಗಡೆಗೆ ಅವಕಾಶ
    • ಈಜಿಪುರ ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲ ತಿರುವು ಪಡೆದು ಎ.ಎಸ್.ಸಿ ಸೆಂಟರ್‌ನಲ್ಲಿ ಎಡ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬೇಕು
    • ಹೆಚ್.ಎ.ಎಲ್ ಕಡೆಯಿಂದ ಬರುವ ವಾಹನಗಳು ಎ.ಎಸ್.ಸಿ ಸೆಂಟರ್‌ನಲ್ಲಿ ಬಲ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬೇಕು
    • ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ ರಸ್ತೆ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ಕಡೆಗೆ ಮಾತ್ರ ಕಾಲ್ನಡಿಗೆಯಲ್ಲಿ ಸಾಗಬೇಕು; ವಿರುದ್ಧ ದಿಕ್ಕಿನಲ್ಲಿ ಸಂಚರಿಸಲು ಅವಕಾಶವಿಲ್ಲ.

      ಪಾರ್ಕಿಂಗ್ ವ್ಯವಸ್ಥೆ

      ಸಾರ್ವಜನಿಕರ ಅನುಕೂಲಕ್ಕಾಗಿ ಶಿವಾಜಿನಗರ ಬಿ.ಎಂ.ಟಿ.ಸಿ ಶಾಪಿಂಗ್ ಕಾಂಪ್ಲೆಕ್ಸ್ – 1ನೇ ಮಹಡಿ, ಯು.ಬಿ. ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ)  ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.