ಬಂಟ್ವಾಳ ಗ್ರಾಮಾಂತರ ಪೋಲೀಸರ ಕಾರ್ಯಾಚರಣೆ.. ಮಾದಕ ವಸ್ತು ವಶಕ್ಕೆ

Bantwal: ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Aug 14, 2026 - 15:10
ಬಂಟ್ವಾಳ ಗ್ರಾಮಾಂತರ ಪೋಲೀಸರ ಕಾರ್ಯಾಚರಣೆ.. ಮಾದಕ ವಸ್ತು ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾವಳಪಡೂರು ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 22.57 ಗ್ರಾಂ ನಿಷೇಧಿತ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು & ಐದು ಮೊಬೈಲ್‌ಗಳು ಸೇರಿ ಒಟ್ಟು ರೂ.4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ನಾಶೀರ್ ಹುಸೇನ್ (37), ಮಹಮ್ಮದ್ ಜುನೈದ್ (38) ಹಾಗೂ ಮೊಹಮ್ಮದ್ ಅಫ್ರೀದಿ (24) ಎಂಬವವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಬಂಟ್ವಾಳ ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ ಅವರ ನೇತೃತ್ವದ ತಂಡವು ಈ ಕಾರ್ಯಾಚರಣೆ ನಡೆಸಿದೆ. 

ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ, ಪಿಎಸ್ಐ ರನ್ನ ಗೌಡ ಎಸ್‌ ಪಾಟೀಲ್, ಪಿಎಸ್‌ಐ ಶಿವರಾಮ್‌, ಫಕೀರಪ್ಪ, ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್‌ ರೈ, ಪ್ರಶಾಂತ್, ಲೋಕೇಶ್‌, ವಿವೇಕ್ ರೈ, ಕುಮಾರ್, ಬಸವರಾಜ್‌, ಶ್ರೀಧರ್‌ ಮತ್ತು ಧನ್ಯಶ್ರೀ ಈ ದಾಳಿಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಹಾಗೂ ಸಂಪತ್ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.