ಬಿಸಿ ರೋಡ್‌ನಲ್ಲಿ ಯುವತಿಗೆ ಚೂರಿ ಇರಿತ: ಸ್ಥಿತಿ ಚಿಂತಾಜನಕ
BC Road: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನಿಲ್ದಾಣದ ಬಳಿ, ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21ರಿಂದ 25 ವರ್ಷದೊಳಗಿನ ಯುವತಿಗೆ ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ದಕ್ಷಿಣ ಕನ್ನಡ: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನಿಲ್ದಾಣದ ಬಳಿ, ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21ರಿಂದ 25 ವರ್ಷದೊಳಗಿನ ಯುವತಿಗೆ ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಯುವತಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ತಕ್ಷಣ ಬಂಟ್ವಾಳದಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಈ ನಡುವೆ ಯುವತಿ ಮೃತಪಟ್ಟಿರುವುದಾಗಿಯೂ ವರದಿಯಾಗಿದ್ದು, ಅಧಿಕೃತ ಮಾಹಿತಿ ಲಭಿಸಿಲ್ಲ.
Tags:
ಡೇ2ಡೇ ನ್ಯೂಸ್ ಬ್ಯೂರೋ
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.