ಬಿಎಡ್ ಪ್ರವೇಶ: ಕೆಇಎಯಿಂದ ಆನ್‌ಲೈನ್‌ ಅರ್ಜಿ ಆಹ್ವಾನ

KEA: ಬಿಎಡ್ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಕೆಇಎ ಅರ್ಜಿ ಆಹ್ವಾನಿಸಿದೆ.

Nov 20, 2026 - 16:41
Nov 20, 2026 - 16:42
ಬಿಎಡ್ ಪ್ರವೇಶ: ಕೆಇಎಯಿಂದ ಆನ್‌ಲೈನ್‌ ಅರ್ಜಿ ಆಹ್ವಾನ

ಬೆಂಗಳೂರು: ಇದೇ ಮೊದಲ ಬಾರಿಗೆ, ರಾಜ್ಯ ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಎರಡು ವರ್ಷಗಳ ಬಿಎಡ್ ಕೋರ್ಸ್ ಪ್ರವೇಶಕ್ಕೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೌನ್ಸೆಲಿಂಗ್ ನಡೆಸಲಿದೆ. ಈ ಸಲುವಾಗಿ ಅರ್ಹರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ.
 
ಅರ್ಜಿ ಸಲ್ಲಿಸಲು ನ.30 ಕೊನೆ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಗೆ ಡಿ.2 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಪದವಿ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡು, ಸೀಟು ಹಂಚಿಕೆ‌ ಮಾಡಲಾಗುತ್ತದೆ.
 
ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಅಳವಡಿಸಿಕೊಂಡಿರುವ ಮಾನದಂಡಗಳ ಪ್ರಕಾರ ಬಿಎಡ್ ಕೋರ್ಸ್ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.
 
ಸರ್ಕಾರಿ, ಅನುದಾನಿತ, ಅನುದಾನ ರಹಿತ ಬಿಎಡ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ ಎಂದು ಕೆಇಎ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.