ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲಕ್ಕೆ ಸಿಎಂ ಭೇಟಿ
Belagavi: ರೇಣುಕಾ ಯಲ್ಲಮ್ಮ ದೇಗುಲಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಭೇಟಿ ನೀಡಿದ್ದಾರೆ.
ಬೆಳಗಾವಿ: ಇಲ್ಲಿನ ಸವದತ್ತಿ ತಾಲೂಕಿನ ಪವಿತ್ರ ಪುಣ್ಯಕ್ಷೇತ್ರದಲ್ಲಿರುವ 'ರೇಣುಕಾ ಯಲ್ಲಮ್ಮ ದೇವಸ್ಥಾನ'ಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಭೇಟಿ ನೀಡಿದ್ದಾರೆ.
ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಿದ್ದಾರೆ. ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳಿಗೆ ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಶ್ವಾಸ್ ವೈದ್ಯ, ಎನ್.ಹೆಚ್.ಕೋನರೆಡ್ಡಿ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಮುಖಂಡರು ಸಾಥ್ ಕೊಟ್ಟಿದ್ದಾರೆ.