ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 'ಆಟಿ ಕೂಟ' ಆಯೋಜನೆ
Bellandur: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ ಮತ್ತು ಆಟಿ ತಿಂಗಳ ವೈಶಿಷ್ಟ್ಯವನ್ನು ಪರಿಚಯಿಸುವ 'ಆಟಿ ಕೂಟ' ಕಾರ್ಯಕ್ರಮವು ಈಚೆಗೆ ನಡೆಯಿತು.
ಪುತ್ತೂರು (ಬೆಳಂದೂರು): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ ಮತ್ತು ಆಟಿ ತಿಂಗಳ ವೈಶಿಷ್ಟ್ಯವನ್ನು ಪರಿಚಯಿಸುವ 'ಆಟಿ ಕೂಟ' ಕಾರ್ಯಕ್ರಮವು ಈಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಕಾಣಿಯೂರಿನ ಸರ್ಕಾರಿ ಪದವಿ-ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಜಗದೀಶ್ ಬಾರಿಕೆ ಭಾಗವಹಿಸಿದ್ದರು. ಆಟಿ ತಿಂಗಳ ಮಹತ್ವ, ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳು, ಆಹಾರ ಪದ್ಧತಿ ಮತ್ತು ಜನಜೀವನದ ವಿವಿಧ ಆಯಾಮಗಳನ್ನು ಅರ್ಥಪೂರ್ಣವಾಗಿ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ರಾಘವ ಎನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವೇಣುಗೋಪಾಲ ಕಳುವಜೆ, ಸಿಡಿಸಿ ಸದಸ್ಯ ವೆಂಕಟೇಶ್ ಭಟ್, ಸೀತಾರಾಮ ಗೌಡ ಮುಂಡಾಳ, ಅಚ್ಚುತ ಗೌಡ ಮತ್ತು ಕಾಲೇಜಿನ ಐಕ್ಯೂಎಸಿ ಸಂಚಾಲಕ ಮಹೇಶ್ ಬಿ.ಎಸ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಅಂಗವಾಗಿ, ಆಟಿ ತಿಂಗಳ ವಿಶೇಷ ಖಾದ್ಯ ಉಪಹಾರ ಕೂಟವನ್ನು ಏರ್ಪಡಿಸಲಾಗಿತ್ತು. ಆ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಲಾವಣ್ಯ ಸ್ವಾಗತಿಸಿ, ವಂದಿಸಿದರು. ಹರ್ಷಿತಾ ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.