ಬೆಳ್ತಂಗಡಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Beltangady: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಎರಡು ಅಂಗನವಾಡಿ ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿ ಖಾಲಿಯಿರುವ 2 'ಸಹಾಯಕಿ' ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Nov 18, 2026 - 19:51
Nov 18, 2026 - 19:53
ಬೆಳ್ತಂಗಡಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಎರಡು ಅಂಗನವಾಡಿ ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿ ಖಾಲಿಯಿರುವ 2 'ಸಹಾಯಕಿ' ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
 
ಬೆಳ್ತಂಗಡಿಯ ಉದಯನಗರ ಅಂಗನವಾಡಿ ಮತ್ತು ಶಿಶುಪಾಲನಾ ಕೇಂದ್ರ & ಉಜಿರೆ ಗ್ರಾಮದ ಎಸ್‌ಡಿಎಂ ಅಂಗನವಾಡಿ ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿ ತಲಾ ಒಂದು ಹುದ್ದೆಗಳನ್ನು ತುಂಬಲಾಗುತ್ತದೆ. 
 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಕನಿಷ್ಠ 7ನೇ ತರಗತಿ ಉತ್ತೀರ್ಣರಾದವರನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ.
 
ಅರ್ಜಿ ಸಲ್ಲಿಸಲು ಡಿ.2 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ನಿರೀಕ್ಷಣಾ ಮಂದಿರದ ಹಿಂಭಾಗದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.