ಬೆಳ್ತಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ; ಸ್ಕೂಟರ್ ಸವಾರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಬುಧವಾರ ಮುಂಜಾನೆ ಟಾಟಾ ಗೂಡ್ಸ್ ವಾಹನವು ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಚಲಿಸುತ್ತಿದ್ದು, ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸವಾರ ಸಂತೋಷ್ ಮೃತಪಟ್ಟಿದ್ದು, ಮತ್ತೊಬ್ಬರು ಬೈಕ್‌ ಸವಾರ ಮೋಹನ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

Nov 11, 2026 - 09:21
Nov 11, 2026 - 09:21
ಬೆಳ್ತಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ; ಸ್ಕೂಟರ್ ಸವಾರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ತಾಲೂಕಿನ ಚರ್ಚ್ ರೋಡ್ ಸಮೀಪ ಹೆದ್ದಾರಿಯಲ್ಲಿ ಬುಧವಾರ(ನ.11) ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಾಟಾ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಾವೂರು ನಿವಾಸಿ ಸಂತೋಷ್ (32) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಗಾಯಾಳು ಮೋಹನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತಪಟ್ಟಿರುವ ಸಂತೋಷ್‌ ಅವರು ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಗಾಯಗೊಂಡಿರುವ ಮೋಹನ್‌ ಅವರು ಸುವರ್ಣ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ

ಲಭ್ಯವಾದ ಮಾಹಿತಿಯ ಪ್ರಕಾರ, ಬುಧವಾರ ಮುಂಜಾನೆ ಟಾಟಾ ಗೂಡ್ಸ್ ವಾಹನವು ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಚಲಿಸುತ್ತಿದ್ದು, ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್‌ ವಾಹನ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸವಾರ ಸಂತೋಷ್ ಮೃತಪಟ್ಟಿದ್ದಾರೆ. ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಮೋಹನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗ್ಗಿನ ವೇಳೆಯಲ್ಲಿ ಸಂಭವಿಸಿದ ಈ ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಘಟನೆಯ ಮಾಹಿತಿ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಸಂದರ್ಭ, ವಾಹನಗಳ ಚಲನವಲನ ಹಾಗೂ ಘಟನೆಗೆ ಕಾರಣವಾದ ಅಂಶಗಳ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.