ದೀಪಾವಳಿ ಪಟಾಕಿ ಸಂಭ್ರಮಕ್ಕೆ ಬೆಂಗಳೂರಿನಲ್ಲಿ ಹೆಚ್ಚಿದ ವಾಯುಮಾಲಿನ್ಯ; ರಾತ್ರಿ 11ರ ಬಳಿಕ ಸಿಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

Bangalore Air Pollution:ಈ ಬಾರಿಯ ದೀಪಾವಳಿ ಸಂಭ್ರಮದಲ್ಲಿ ಪಟಾಕಿಗಳ ಸದ್ದು ಎಲ್ಲೆಡೆ ಜೋರಾಗಿದೆ. ಅದರಲ್ಲಿಯೂ ಬೆಂಗಳೂರು, ಮುಂಬೈ ಹಾಗೂ ದೆಹಲಿಯಂಥ ಮಹಾನಗರಗಳಲ್ಲಿ ಪಟಾಕಿ ಸಿಡಿಸಿರುವುದರ ಪರಿಣಾಮ ವಾಯು ಮಾಲಿನ್ಯದ ಪ್ರಮಾಣವೂ ಏಕಾಏಕಿ ಏರಿಕೆಯಾಗಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಪಟಾಕಿ ಸಿಡಿಸಿರುವುದರಿಂದ ವಾಯುಮಾಲಿನ್ಯ ಸೂಚ್ಯಂಕ ಮಾಪನವು ಅಪಾಯದ ಮಟ್ಟಕ್ಕೆ ತಲುಪಿರುವುದು ಗಂಭೀರ ವಿಚಾರ. ಹೀಗಿರುವಾಗ, ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪರಿಸರ ಕಾಳಜಿಯನ್ನು ಕೂಡ ಮರೆಯಬಾರದು.

Nov 11, 2026 - 07:32
Nov 11, 2026 - 07:32
ದೀಪಾವಳಿ ಪಟಾಕಿ ಸಂಭ್ರಮಕ್ಕೆ ಬೆಂಗಳೂರಿನಲ್ಲಿ ಹೆಚ್ಚಿದ ವಾಯುಮಾಲಿನ್ಯ; ರಾತ್ರಿ 11ರ ಬಳಿಕ ಸಿಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ದೀಪಾವಳಿ(deepavali) ಸಂಭ್ರಮದ ಪಟಾಕಿ(firecrackers) ಸದ್ದು ಈ ಬಾರಿ ಬೆಂಗಳೂರಿನ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಿದೆ. ನಗರದ ಹಲವೆಡೆ ವಾಯು ಗುಣಮಟ್ಟ ಕುಸಿದಿದ್ದು, ವಾಯುಮಾಲಿನ್ಯದ ಪ್ರಮಾಣ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿದೆ. ಸಿಲ್ಕ್ ಬೋರ್ಡ್‌ನಲ್ಲಿ ಗರಿಷ್ಠ 179 AQI ದಾಖಲಾಗಿದ್ದರೆ, ಹೊಂಬೇಗೌಡ ನಗರದಲ್ಲಿ 176 ಹಾಗೂ ಹೆಬ್ಬಾಳದಲ್ಲಿ 168 AQI ವರದಿಯಾಗಿದೆ.

ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಮಳೆಯಾಗಿದ್ದರಿಂದ ಪಟಾಕಿ ಸಿಡಿಸುವ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿ ಮಳೆಯಿಲ್ಲದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸಲಾಗಿದ್ದು, ಮಾಲಿನ್ಯ(pollutions) ಹೆಚ್ಚಳಕ್ಕೆ ಇದೇ ಪ್ರಮುಖ ಕಾರಣ ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 2025ರಲ್ಲಿ ದೀಪಾವಳಿ ದಿನ ಬೆಂಗಳೂರಿನ ಗರಿಷ್ಠ AQI 95ರಷ್ಟಿದ್ದರೆ, ಈ ಬಾರಿ ಬೆಳಿಗ್ಗೆ 9 ಗಂಟೆಗಾಗಲೇ 132ಕ್ಕೆ ತಲುಪಿತ್ತು.

ರಾತ್ರಿ 11ರ ಬಳಿಕ ಪಟಾಕಿ ಸಿಡಿಸಿದರೆ ಸಿಸಿಟಿವಿ ಮೂಲಕ ನಿಗಾ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎರಡು ದಿನಗಳ ಕಾಲ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಮಯದ ಮಿತಿಯನ್ನು ಮೀರಿ ರಾತ್ರಿ 11 ಗಂಟೆಯ ನಂತರ ಪಟಾಕಿ ಸಿಡಿಸುವವರನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.

ನಿಯಮಗಳ ಕುರಿತು ಸಾಕಷ್ಟು ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಪಾಲನೆಗೆ ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮುಂದಿನ ವರ್ಷದಿಂದ ಶೇ.100ರಷ್ಟು ಹಸಿರು ಪಟಾಕಿಗಳ ಬಳಕೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಹೊಸ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.