ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

Bengaluru: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಆಯೋಜಿಸಲಾಗಿತ್ತು.

Sep 15, 2026 - 15:17
ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್, ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುರ್ಪಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಲಾಯಿತು. ಆ ಬಳಿಕ ಯುವ ಸಂಸತ್ ಸಭೆಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ, ಆಹಾರ ಸಚಿವ ರಿಜ್ವಾನ್ ಅರ್ಷದ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಶಾಸಕ ಅಲ್ಲಮಪ್ರಭು ಪಾಟೀಲ, ಅಶೋಕ್ ಮನುಗೋಳಿ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಕರ್ನಾಟಕ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬರೆಡ್ಡಿ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ ನಾಯ್ಕ್ ಸೇರಿದಂತೆ ಇತರರು ಇದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.