Vande Bharat Express: ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ಯಶಸ್ವಿ
Vande Bharat Express: ಬೆಂಗಳೂರು-ಮಂಗಳೂರು 'ವಂದೇ ಭಾರತ್ ಎಕ್ಸ್‌ಪ್ರೆಸ್'ನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ.
ಮಂಗಳೂರು: ಕರಾವಳಿ ಭಾಗದ ಜನರ ವರ್ಷಗಳ ಕನಸು ನನಸಾಗುವ ಕಾಲ ಹತ್ತಿರದಲ್ಲಿದೆ. ಅತಿ ಶೀಘ್ರದಲ್ಲೇ ಬೆಂಗಳೂರು - ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಕಾರ್ಯಾಚರಣೆ ನಡೆಸಲಿದೆ.
ಸಕಲೇಶಪುರ - ಸುಬ್ರಹ್ಮಣ್ಯ ರಸ್ತೆ ಘಾಟಿ ವಿಭಾಗದಲ್ಲಿ ಬುಧವಾರ (ಆ.12) 'ವಂದೇ ಭಾರತ್ ಎಕ್ಸ್‌ಪ್ರೆಸ್' ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರವನ್ನು ನಡೆಸಿದೆ. ಬೆಳಗ್ಗೆ 6.42ಕ್ಕೆ ಸಕಲೇಶಪುರದಿಂದ ಹೊರಟ ಈ ರೈಲು, 10.55ಕ್ಕೆ ಸುಬ್ರಹ್ಮಣ್ಯ ರಸ್ತೆ ರೈಲು ನಿಲ್ದಾಣಕ್ಕೆ ಬಂದು ತಲುಪಿತು.
ಘಾಟಿ ಪ್ರದೇಶದಲ್ಲಿ 'ವಂದೇ ಭಾರತ್' ರೈಲು, ಸುರಕ್ಷಿತವಾಗಿ ಓಡಾಟ ನಡೆಸಲು ಆಟೋಮೆಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ) ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಆಗಸ್ಟ್ 20 ರವರೆಗೆ ಈ ರೈಲಿನ ಪರೀಕ್ಷಾರ್ಥ ಸಂಚಾರ ಜರುಗಲಿದೆ.
ನೈಋತ್ಯ ರೈಲ್ವೆ ಮೈಸೂರು ವಿಭಾಗವು 'ವಂದೇ ಭಾರತ್ ಎಕ್ಸ್‌ಪ್ರೆಸ್'ನ ನಿರ್ವಹಣಾ ಜವಾಬ್ದಾರಿ ಹೊತ್ತಿದೆ. ಇತ್ತೀಚೆಗೆ, ಈ 20 ಬೋಗಿಗಳ ರೈಲನ್ನು ಚೆನ್ನೈನ 'ಇಂಟಿಗ್ರಲ್ ಕೋಚ್ ಫ್ಯಾಕ್ಟರಿ'ಯಿಂದ ಹಸ್ತಾಂತರಿಸಲಾಗಿದೆ.
ಆಗಸ್ಟ್ 11 ರಂದು ಮೈಸೂರಿನಲ್ಲಿ ಕೆಲವು ಪರೀಕ್ಷೆಗಳನ್ನು ನಡೆಸಲಾಗಿತ್ತು. ಅದೇ ದಿನ ರಾತ್ರಿ ಸಕಲೇಶಪುರಕ್ಕೆ ತರಲಾಗಿದೆ. ಪ್ರಾಯೋಗಿಕ ಸಂಚಾರವು ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ, ಬೆಂಗಳೂರು-ಮಂಗಳೂರು ಮಾರ್ಗದಲ್ಲಿ 'ವಂದೇ ಭಾರತ್ ಎಕ್ಸ್‌ಪ್ರೆಸ್' ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷತೆಗಳೇನು:
ಇದು ಭಾರತದಲ್ಲಿ ಅತಿವೇಗದ ರೈಲು ಎಂದು ಹೆಸರಾಗಿದೆ. ಅತ್ಯಾಧುನಿಕ ಸೌಲಭ್ಯವನ್ನು ಒಳಗೊಂಡಿದೆ. ಆರಾಮದಾಯಕ ಸೀಟುಗಳು, ಸಂಪೂರ್ಣ ಹವಾ ನಿಯಂತ್ರಣ (ಎಸಿ) ಬೋಗಿಗಳು, ವೈಫೈ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲು, ಅಗ್ನಿ ನಿರೋಧಕ ಸಾಧನ, ಜೈವಿಕ ಶೌಚಾಲಯವನ್ನು ಹೊಂದಿದೆ. 2047ರ ವೇಳೆಗೆ 4,500 'ವಂದೇ ಭಾರತ್' ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಯೋಜಿಸಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.