ಹೊಸ ಬೈಕ್ ಖರೀದಿಸಬೇಕೇ.. ಈ 3 ಗಾಡಿಗಳು ಬೆಸ್ಟ್.. 90 Km ಮೈಲೇಜ್!
Best 3 Mileage Bike India: ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100, ಹೀರೋ ಸ್ಪ್ಲೆಂಡರ್ ಪ್ಲಸ್ ಹಾಗೂ ಹೋಂಡಾ ಶೈನ್ 100 ಬೆಸ್ಟ್ ಚಾಯ್ಸ್ ಆಗಲಿವೆ.
ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100, ಹೀರೋ ಸ್ಪ್ಲೆಂಡರ್ ಪ್ಲಸ್ ಹಾಗೂ ಹೋಂಡಾ ಶೈನ್ 100 ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಬಜಾಜ್ ಪ್ಲಾಟಿನಾ 100 (Bajaj Platina 100):
ಇದು ಜನಪ್ರಿಯ ಬೈಕ್ ಆಗಿದ್ದು, ಕೈಗೆಟುಕುವ ಬೆಲೆಯೂ ದೊರೆಯುತ್ತದೆ. ರೂ.72 942 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 102-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):
ಈ ಮೋಟಾರ್‌ಸೈಕಲ್‌ನ್ನು ಬಡ ಹಾಗೂ ಮಧ್ಯಮ ವರ್ಗದ ಜನರು ಮೆಚ್ಚಿದ್ದಾರೆ. ರೂ.77,777 ರಿಂದ ರೂ.80,531 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಐ3ಎಸ್ ಟೆಕ್ನಾಲಜಿಯನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಶೈನ್ 100 (Honda Shine 100):
ಈ ಮೋಟಾರ್‌ಸೈಕಲ್‌ನ್ನು ಗ್ರಾಹಕರು ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ರೂ.67,200 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 65 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.