ಬಿಡದಿ ಟೌನ್‌ಶಿಪ್‌: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ

Bidadi Township: ಬಿಡದಿ ಟೌನ್‌ಶಿಪ್‌ ಸಂಬಂಧ ಯಾವುದೇ ರೈತರಿಂದಲೂ ಜಮೀನನ್ನು ಬಲವಂತದಿಂದ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

Jul 15, 2026 - 17:55
ಬಿಡದಿ ಟೌನ್‌ಶಿಪ್‌: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಸಂಬಂಧ ಯಾವುದೇ ರೈತರಿಂದಲೂ ಜಮೀನನ್ನು ಬಲವಂತದಿಂದ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಹೇಳಿದರು. 

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಮೀನು ಕೊಡಲು ಇಷ್ಟವಿಲ್ಲದವರು ಕೃಷಿ ಮುಂದುವರೆಸಬಹುದು. ಇಷ್ಟವಿದ್ದವರು ಸರ್ಕಾರಕ್ಕೆ ಜಮೀನು ಕೊಡಬಹುದು. ಆದರೆ, ಬಲವಂತವಾಗಿ ಒಂದು ಗುಂಟೆ ಜಮೀನನ್ನು ಪಡೆದುಕೊಳ್ಳುವುದಿಲ್ಲ ಎಂದರು.

ಬಿಡದಿ ಟೌನ್‌ಶಿಪ್‌ ಅನುಷ್ಠಾನ ಸಂಬಂಧ ಪರಿಶೀಲಿಸಲು ಸಮಿತಿ ರಚಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಿತಿ ವರದಿ ಆಧರಿಸಿ ಯೋಜನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.