ರೈತರ ಮೇಲೆ ಎಫ್ಐಆರ್: ನಿಖಿಲ್ ಕುಮಾರಸ್ವಾಮಿ ಖಂಡನೆ

Nikhil Kumaraswamy: ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದ ರೈತರ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಖಂಡಿಸಿದ್ದಾರೆ.

Jul 14, 2026 - 12:53
ರೈತರ ಮೇಲೆ ಎಫ್ಐಆರ್: ನಿಖಿಲ್ ಕುಮಾರಸ್ವಾಮಿ ಖಂಡನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದ ರೈತರ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. 'ಬಿಡದಿ ಟೌನ್‌ಶಿಪ್ ನೆಪದಲ್ಲಿ ಅಮಾಯಕ ರೈತರ ಮೇಲೆ ಎಫ್ಐಆರ್ ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ರೈತರ ಭೂಮಿಗೆ ನುಗ್ಗಿ ಜಂಟಿ ಮಾಪನ ಮಾಡಲು ಮುಂದಾಗಿದ್ದು, ಅದನ್ನು ಪ್ರಶ್ನಿಸಿದ ರೈತರ ಹೋರಾಟವನ್ನು ಹತ್ತಿಕ್ಕಲು ಈ ಜನವಿರೋಧಿ ಸರ್ಕಾರ ಎಫ್ಐಆರ್ ಅಸ್ತ್ರ ಬಳಸಿ ಬೆದರಿಸುತ್ತಿದೆ' ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ. ಇನ್ನು 48 ಗಂಟೆಗಳ ಒಳಗೆ ರೈತರ ಮೇಲಿನ ಸುಳ್ಳು ಎಫ್ಐಆರ್ ರದ್ದುಗೊಳಿಸಿ, ವಶಕ್ಕೆ ಪಡೆದಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದು ನಿಶ್ಚಿತ' ಎಂದು ತಿಳಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.