ಬಸವರಾಜ ಹೊರಟ್ಟಿ ಮನೆಗೆ ಬಿಜೆಪಿ ನಿಯೋಗ ಭೇಟಿ

BJP Delegation: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು, ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬಿಜೆಪಿ ನಿಯೋಗ ಅವರನ್ನು ಭೇಟಿಯಾಗಿದೆ.

Aug 8, 2026 - 18:08
ಬಸವರಾಜ ಹೊರಟ್ಟಿ ಮನೆಗೆ ಬಿಜೆಪಿ ನಿಯೋಗ ಭೇಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti), ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬಿಜೆಪಿ ನಿಯೋಗ ಅವರನ್ನು ಭೇಟಿಯಾಗಿದೆ. ಈ ಬಗ್ಗೆ ಪಕ್ಷದ ಅಧಿಕೃತ 'ಎಕ್ಸ್' ಖಾತೆಯಲ್ಲಿಯೂ ಪೋಸ್ಟ್ ಮಾಡಲಾಗಿದೆ. 

'ಅಧಿಕಾರದ ಅಹಂಕಾರದಲ್ಲಿ ಮೆರೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ, ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ ನಿವಾಸಕ್ಕೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗವು ಭೇಟಿ ನೀಡಿತು. ಘಟನೆಯ ಕುರಿತು ಸಮಾಲೋಚನೆ ನಡೆಸಿ, ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಲಾಯಿತು' ಎಂದು ಬರೆದುಕೊಂಡಿದೆ. 

ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹಾಗೂ ಮಹೇಶ್ ಟೆಂಗಿನಕಾಯಿ ಇದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.