ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Apr 4, 2025 - 13:05
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ.

ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗೆ 4.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿನಯ್​ಗೆ ಮದುವೆ ಆಗಿತ್ತು, ಒಂದು ಮಗು ಕೂಡ ಇದೆ.

ವಿನಯ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಶುರುವಾಗಿವೆ. ವಿನಯ್ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್​ಆ್ಯಪ್​ ಗ್ರೂಪ್​ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್​ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆ‌ರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್​ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.