ಬೆಳ್ಳಾರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಭಾರಿ ಸ್ಪಂದನೆ

Bellare Breast Cancer Awareness Free Health Checkup Camp: ರೋಟರಿ ಕ್ಲಬ್ ಬೆಳ್ಳಾರೆ ಟೌನ್, ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವರ ಸಹಕಾರದೊಂದಿಗೆ ರೋಟರಿ ಮ್ಯಾಮೋಗ್ರಫಿ ಸೆಂಟರ್ ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್ ಪುತ್ತೂರು ಮತ್ತು ಐಎಂಎ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿದೆ.

Jul 30, 2026 - 21:05
Jul 31, 2026 - 08:10
ಬೆಳ್ಳಾರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಭಾರಿ ಸ್ಪಂದನೆ

ಬೆಳ್ಳಾರೆ: ಸ್ತನ ಕ್ಯಾನ್ಸರ್ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸುವ ಹಾಗೂ ಆರಂಭಿಕ ಪತ್ತೆ ಹಚ್ಚುವ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜು.30 ರಂದು ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಹಕಾರದೊಂದಿಗೆ ರೋಟರಿ ಮ್ಯಾಮೋಗ್ರಫಿ ಸೆಂಟರ್ ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್ ಪುತ್ತೂರು ಮತ್ತು ಐಎಂಎ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪುತ್ತೂರು ಪ್ರಗತಿ ಆಸ್ಪತ್ರೆಯ ಅಧ್ಯಕ್ಷ ಡಾ.ಶ್ರೀಪತಿ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರಲ್ಲಿ ಕಂಡುಬರುವ ಕ್ಯಾನ್ಸರ್ ಪ್ರಕರಣಗಳಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣ ಅತಿ ಹೆಚ್ಚು. ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಶೇ.90ರಷ್ಟು ಗುಣಪಡಿಸಬಹುದು. ನಾಚಿಕೆ, ಭಯ, ಅಜ್ಞಾನದಿಂದಾಗಿ ಅನೇಕ ಮಹಿಳೆಯರು ಆಸ್ಪತ್ರೆಗೆ ಬರಲು ಹಿಂಜರಿಯುತ್ತಾರೆ. ನಿಯಮಿತ ಸ್ವಯಂ ಪರೀಕ್ಷೆ, ವರ್ಷಕ್ಕೊಮ್ಮೆ ವೈದ್ಯಕೀಯ ತಪಾಸಣೆ ಮತ್ತು ಮ್ಯಾಮೋಗ್ರಫಿ ಪರೀಕ್ಷೆ ಅತ್ಯಗತ್ಯ ಎಂದು ತಿಳಿಸಿದರು.

ಸ್ತನದಲ್ಲಿ ಗಡ್ಡೆ, ನೋವು, ಮೊಲೆ ತೊಟ್ಟಿನಿಂದ ಸ್ರಾವ, ಆಕಾರದಲ್ಲಿ ಬದಲಾವಣೆ ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರೋಗ್ಯಕರ ಜೀವನಶೈಲಿ, ಸರಿಯಾದ ಆಹಾರ, ವ್ಯಾಯಾಮ, ಧೂಮಪಾನ-ಮದ್ಯಪಾನದಿಂದ ದೂರವಿರುವುದು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿ ಎಂದು ಅವರು ಜಾಗೃತಿ ಮೂಡಿಸಿದರು.

ವೇದಿಕೆಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಆರೀಫ್ ಬಿ.ಎಂ, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಅಧ್ಯಕ್ಷ ಡಾ.ಗೋಪಾಲಕೃಷ್ಣ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್, ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪೆರುವಾಜೆ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಅವರು ಸ್ವಾಗತಿಸಿದರು. ಪೂರ್ಣಿಮಾ ಅವರು ಪ್ರಾರ್ಥಿಸಿದರು. ಬಿರುಮಲೆ ರೋಟರಿ ಕಾರ್ಯದರ್ಶಿ ಸಂತೋಷ್ ಅವರು ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ರೋಟರಿ ಕಾರ್ಯದರ್ಶಿ ಪ್ರಶಾಂತ್ ತಂಟೆಪ್ಪಾಡಿ ವಂದಿಸಿದರು.

ಶಿಬಿರದಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಉಚಿತ ತಪಾಸಣೆ, ಸಮಾಲೋಚನೆ ಮತ್ತು ಮ್ಯಾಮೋಗ್ರಫಿ ಸ್ಕ್ರೀನಿಂಗ್ ಸೌಲಭ್ಯದ ಲಾಭ ಪಡೆದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ರೋಟರಿ ಕ್ಲಬ್ ಪದಾಧಿಕಾರಿಗಳು, ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯರು ಮತ್ತು ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.