34 ವರ್ಷಗಳ ದೇಶ ಸೇವೆಗೆ ನಿವೃತ್ತಿ: ಯೋಧ ಸುಂದರ ಪೂಜಾರಿ ಪಳಂಬೆಗೆ ಭವ್ಯ ಸ್ವಾಗತ.. ಗೌರವ ಸನ್ಮಾನ
BSF Soldier Sundar Poojary Palambe Retirement: ಭಾರತದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸುದೀರ್ಘ 34 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾದ ಯೋಧ ಸುಂದರ ಪೂಜಾರಿ ಪಳಂಬೆ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.
ಪುತ್ತೂರು: ಭಾರತದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸುದೀರ್ಘ 34 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾದ ಯೋಧ ಸುಂದರ ಪೂಜಾರಿ ಪಳಂಬೆ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಇದರೊಂದಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಭವ್ಯ ಮೆರವಣಿಗೆ:
ದೇಶ ಸೇವೆ ಮಾಡಿ, ಸ್ವಗ್ರಾಮಕ್ಕೆ ಆಗಮಿಸಿದ ಅವರನ್ನು ಕೌಡಿಚ್ಚರ್‌ನಲ್ಲಿ ಮುಖಂಡರು ಹಾಗೂ ಗ್ರಾಮಸ್ಥರು ಪ್ರೀತಿಯಿಂದ ಬರಮಾಡಿಕೊಂಡರು. ಆ ಬಳಿಕ ಮುಡಿಪಿನಡ್ಕ ಮಾರ್ಗವಾಗಿ, ಹುಟ್ಟೂರಾದ ಪಲಂಬೆಯವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಜಯಘೋಷಗಳು ಮೊಳಗಿದವು.

ಪಲಂಬೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿವಹಿಸಿ, ಸುಂದರ ಪೂಜಾರಿ ಅವರ ಸೇವೆಯನ್ನು ಸ್ಮರಿಸಿದರು. ಶಾಲು ಹೊದಿಸಿ, ಗೌರವಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.