ಮಂಗಳೂರು ಕಮಿಷನರೇಟ್‌ನಲ್ಲಿ ಇನ್ಮುಂದೆ ರಾತ್ರಿ 11.45ಕ್ಕೆ ವ್ಯಾಪಾರ-ವಹಿವಾಟು ಬಂದ್
Mangaluru: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ಅವರು, ಇಂದು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಮಂಗಳೂರು: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಇಂದು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇನ್ಮುಂದೆ ಪ್ರತಿದಿನ ರಾತ್ರಿ 11.45 ರಿಂದ ಮರುದಿನ ಬೆಳಗ್ಗೆ 5.30 ರವರೆಗೆ ಅಂಗಡಿ-ಮುಂಗಟ್ಟು, ಟೀ ಸ್ಟಾಲ್, ಹೋಟೆಲ್-ರೆಸ್ಟೋರೆಂಟ್, ಪಾನ್ ಸ್ಟಾಲ್ ಸೇರಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದ್ದಾರೆ.
ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಲೈಸೆನ್ಸ್ ಹೊಂದಿದವರಿಗೆ ಇದು ಅನ್ವಯಿಸುವುದಿಲ್ಲ. ಅವರು ಲೈಸೆನ್ಸ್‌ನಲ್ಲಿ ನಿಗದಿಪಡಿಸಲಾದ ನಿಯಮದಂತೆ ಪಾಲಿಸುವಂತೆ ಸೂಚಿಸಿದ್ದಾರೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿ ಸೇವೆಗಳು ಹಾಗೂ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಆದೇಶವು ತಕ್ಷಣದಿಂದ ಜಾರಿಗೆ ಬಂದು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.