ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ.. ಸಿಎಂ ಡಿ.ಕೆ.ಶಿವಕುಮಾರ್ ಪೋಸ್ಟ್

CM DK Shivakumar: ಸೆ.18 ಶುಕ್ರವಾರದಂದು ಮಂಗಳೂರು ನಗರದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಜರುಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಸಿಎಂ ಆಫ್ ಕರ್ನಾಟಕ' ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

Sep 15, 2026 - 13:23
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ.. ಸಿಎಂ ಡಿ.ಕೆ.ಶಿವಕುಮಾರ್ ಪೋಸ್ಟ್

ಬೆಂಗಳೂರು: ಸೆ.18 ಶುಕ್ರವಾರದಂದು ಮಂಗಳೂರು ನಗರದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಜರುಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು 'ಸಿಎಂ ಆಫ್ ಕರ್ನಾಟಕ' ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. 
 
'ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ, ಇದೇ ಸೆ.18 ರಂದು ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ' 
 
'ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದಿಸುವುದು, ಮೀನುಗಾರಿಕೆ, ಪ್ರವಾಸೋದ್ಯಮ, ಮೂಲಸೌಕರ್ಯ ಹಾಗೂ ಕೈಗಾರಿಕಾ ರಂಗಗಳಿಗೆ ಹೊಸ ವೇಗ ನೀಡುವುದು ಸರ್ಕಾರದ ಧೈಯೋದ್ದೇಶವಾಗಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತಂದು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದರೊಂದಿಗೆ, ಈ ಸಭೆಯು ಕರಾವಳಿಯ ಸರ್ವಾಂಗೀಣ ವಿಕಾಸಕ್ಕೆ ಹೊಸ ಮುನ್ನುಡಿ ಬರೆಯಲಿದೆ' ಎಂದು ಆ ವಿಡಿಯೋಗೆ ಶೀರ್ಷಿಕೆಯನ್ನು ಬರೆಯಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.