1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ.. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

Karnataka Police: ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಜುಲೈ 22ರವರೆಗೆ ಮಾತ್ರ ಅವಕಾಶವಿದೆ.

Jul 16, 2026 - 13:01
1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ.. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಜುಲೈ 22 ರವರೆಗೆ ಮಾತ್ರ ಅವಕಾಶವಿದೆ.
 
ಒಟ್ಟು 1,600 ಹುದ್ದೆಗಳು ಖಾಲಿಯಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಲಾಗುತ್ತದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವರು ಅರ್ಜಿ ಸಲ್ಲಿಕೆ ಮಾಡಬಹುದು.
 
ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 35 ವರ್ಷದವರೆಗೆ ಅವಕಾಶವಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷದವರೆಗೆ ಸಡಿಲಿಕೆಯನ್ನು ನೀಡಲಾಗಿದೆ. 
 
ಆಯ್ಕೆಯಾದವರಿಗೆ ತಿಂಗಳಿಗೆ ರೂ.37,500 ರಿಂದ ರೂ.76,100 ವೇತನವಿದೆ. 
 
ಸಾಮಾನ್ಯ, ಇತರೆ ಪ್ರವರ್ಗಗಳ (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು ರೂ.500 ಪರೀಕ್ಷಾ ಶುಲ್ಕ ಪಾವತಿಸಬೇಕು.
 
ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಿರಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.