ಮುತ್ತಾಝ್ ಅಲಿ ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

Oct 8, 2024 - 11:43
ಮುತ್ತಾಝ್ ಅಲಿ ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಮುತ್ತಾಝ್ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್ (41) ಆಕೆಯ ಪತಿ A5 ಆರೋಪಿ ಶುಐಬ್ ಹಾಗೂ ಆರೋಪಿ ಸತ್ತಾರ್ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ.ರೆಹಮತ್ ಮತ್ತು ಆಕೆಯ ಪತಿ ಶುಐಬ್‌ನನ್ನು ಸೋಮವಾರ ಸಂಜೆ ಕೇರಳದಲ್ಲಿ ವಶಕ್ಕೆ ಪಡೆದಿದ್ದು, ಸಿರಾಜ್ ನನ್ನು ಕೃಷ್ಣಾಪುರದ ಆತನ ಮನೆಯಿಂದಲೇ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಮಧ್ಯಪ್ರದೇಶ | 16 ವರ್ಷಗಳಿಂದ ಗಂಡನ ಮನೆಯಲ್ಲಿ ಒತ್ತೆಸೆರೆಯಲ್ಲಿದ್ದ ಮಹಿಳೆಯ... ಘಟನೆಗೆ ಸಂಬಂಧಿಸಿ ಮಮಾಝ್ ಅಲಿ ಅವರ ಸಹೋದರ ಹೈದರ್ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು. ಅವರ ದೂರು ಆಧರಿಸಿ ಐಪಿಸಿ 308(2), 308(5), 352, 351(2) 190 ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸದ್ಯ ಪ್ರಕರಣದಲ್ಲಿನ ಪ್ರಮುಖ A1 ಆರೋಪಿ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ພ໐໖໖.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.