ಚೆಸ್: ಇಂದ್ರಪ್ರಸ್ಥ ವಿದ್ಯಾಲಯ'ದ ವಿದ್ಯಾರ್ಥಿಗಳ ಸಾಧನೆ

Indraprastha Vidyalaya: ವಳಾಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ 'ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ 'ಇಂದ್ರಪ್ರಸ್ಥ ವಿದ್ಯಾಲಯ'ದ ವಿದ್ಯಾರ್ಥಿಗಳು ಜಯಿಸಿದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Aug 12, 2026 - 19:19
ಚೆಸ್: ಇಂದ್ರಪ್ರಸ್ಥ ವಿದ್ಯಾಲಯ'ದ ವಿದ್ಯಾರ್ಥಿಗಳ ಸಾಧನೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ, ವಳಾಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ 'ವಲಯ ಮಟ್ಟದ ಚೆಸ್ ಸ್ಪರ್ಧೆ ನಡೆಯಿತು.

ಈ ಪಂದ್ಯಾವಳಿಯಲ್ಲಿ 'ಇಂದ್ರಪ್ರಸ್ಥ ವಿದ್ಯಾಲಯ'ದ ವಿದ್ಯಾರ್ಥಿಗಳು ಜಯಿಸಿದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

17 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ದಕ್ಷ್ ತೃತೀಯ ಸ್ಥಾನ ಗಳಿಸಿದ್ದು, ಬಾಲಕಿಯರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ವೃದ್ಧಿ ರೈ  ಐದನೇ ಸ್ಥಾನವನ್ನು ಪಡೆದಿದ್ದಾರೆ.

14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ 8 ತರಗತಿ ವಿದ್ಯಾರ್ಥಿ ರಿತ್ವಿಕ್ ಜಿ.ಕೆ ಪ್ರಥಮ ಸ್ಥಾನದಲ್ಲಿದ್ದು, ಬಾಲಕಿಯರ ವಿಭಾಗದಲ್ಲಿ 8 ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ಎನ್.ಕೆ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಪ್ರಾಥಮಿಕ ಬಾಲಕರ ವಿಭಾಗದಲ್ಲಿ 7 ತರಗತಿ ವಿದ್ಯಾರ್ಥಿ ನೇಹಲ್ ವಿ.ಎನ್ ತೃತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಜೊಸ್ವಿನಾ ಪೌಲ ಸಿಕ್ವೆರಾ ಪ್ರಥಮ ಸ್ಥಾನ ಪಡೆದಿದ್ದಾರೆ. 
     
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಹಾಗೂ  ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.