ವಲಯ ಮಟ್ಟದ ಚೆಸ್ ಪಂದ್ಯ: ತಾಲೂಕು ಮಟ್ಟಕ್ಕೆ ಸಮರ್ಥ್ ಬಾಹುಬಲಿ ಯಲ್ಲಟ್ಟಿ ಆಯ್ಕೆ

Chess: ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸಮರ್ಥ್ ಬಾಹುಬಲಿ ಯಲ್ಲಟ್ಟಿ, ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Jul 28, 2026 - 14:47
ವಲಯ ಮಟ್ಟದ ಚೆಸ್ ಪಂದ್ಯ: ತಾಲೂಕು ಮಟ್ಟಕ್ಕೆ ಸಮರ್ಥ್ ಬಾಹುಬಲಿ ಯಲ್ಲಟ್ಟಿ ಆಯ್ಕೆ

ಪುತ್ತೂರು (ರಾಮಕುಂಜ): ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸಮರ್ಥ್ ಬಾಹುಬಲಿ ಯಲ್ಲಟ್ಟಿ, ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಲಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ, ಈ ಸಾಧನೆ ಮಾಡಿದ್ದಾರೆ. 

ವಿದ್ಯಾರ್ಥಿ ಸಮರ್ಥ್ ಅವರಿಗೆ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಭಟ್ ಚೆಸ್ ತರಬೇತಿ ನೀಡಿದ್ದರು. 

ಇದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ತಾಲೂಕು ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ, ಶಾಲೆಗೆ ಕೀರ್ತಿ ತರುವಂತೆ ಶುಭ ಹಾರೈಸಿದ್ದಾರೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 8 ವರ್ಷಕ್ಕೂ ಹೆಚ್ಚಿನ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.