ಚೆಸ್ ಟೂರ್ನಿ: ಇಂದ್ರಪ್ರಸ್ಥ ವಿದ್ಯಾರ್ಥಿನಿ ವೃದ್ಧಿ ರೈಗೆ ದ್ವಿತೀಯ ಸ್ಥಾನ
Chess Tournament: ಹೈದರಾಬಾದ್‌ನಲ್ಲಿ ನಡೆದ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಇಂದ್ರಪ್ರಸ್ಥ ವಿದ್ಯಾರ್ಥಿನಿ ವೃದ್ಧಿ ರೈ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಉಪ್ಪಿನಂಗಡಿ: ವಿದ್ಯಾಭಾರತಿ ವತಿಯಿಂದ, ಈಚೆಗೆ ಹೈದರಾಬಾದ್‌ನಲ್ಲಿ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾವಳಿ ನಡೆಯಿತು.
17 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ವೃದ್ಧಿ ರೈ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಈ ವಿದ್ಯಾರ್ಥಿನಿ ಸಾಧನೆಗೆ ವಿದ್ಯಾಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿಯ ಅಧ್ಯಕ್ಷರು, ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.