'ಗೋಲ್ಡನ್‌ ಚಾರಿಯಟ್‌' ರೈಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

CM D.K.Shivakumar: 'ಗೋಲ್ಡನ್‌ ಚಾರಿಯಟ್‌' ರೈಲಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಇಂದು ಚಾಲನೆ ನೀಡಿದರು.

Oct 24, 2026 - 12:49
'ಗೋಲ್ಡನ್‌ ಚಾರಿಯಟ್‌' ರೈಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಬೆಂಗಳೂರು: 'ಗೋಲ್ಡನ್‌ ಚಾರಿಯಟ್‌' ರೈಲಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಇಂದು ಚಾಲನೆ ನೀಡಿದರು. ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಿದ್ದಾರೆ.
 
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಉಪಸ್ಥಿತಿಯಲ್ಲಿ 2026-27ನೇ ಸಾಲಿನ ಕರ್ನಾಟಕದ ಹೆಮ್ಮೆಯ ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' (ಸುವರ್ಣ ರಥ) ಪ್ರವಾಸಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದೆ.
'ಪ್ರೈಡ್ ಆಫ್ ಕರ್ನಾಟಕ' ಹೆಸರಿನ ಈ ಋತುವಿನ ಮೊದಲ ಯಾನವು ಸಂಪೂರ್ಣವಾಗಿ ಭರ್ತಿಯಾಗಿದ್ದು, 75 ಮಂದಿ ಅತಿಥಿಗಳು ನಾಡಿನ ಭವ್ಯ ಪರಂಪರೆ, ವನ್ಯಜೀವಿ ಸಂಪತ್ತು, ಪ್ರಕೃತಿ ಸೌಂದರ್ಯ ಹಾಗೂ ಸಾಂಸ್ಕೃತಿಕ ಸಿರಿವಂತಿಕೆಯನ್ನು ಈ ಅದ್ಭುತ ಪಯಣದ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.
 
2026–27ನೇ ಸಾಲಿನಲ್ಲಿ ಒಟ್ಟು 13 ಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿಶ್ವದರ್ಜೆಯ ಐಷಾರಾಮಿ ಪ್ರವಾಸೋದ್ಯಮದ ಮೂಲಕ ಕರ್ನಾಟಕದ ಶ್ರೀಮಂತ ಇತಿಹಾಸವನ್ನು ಜಗತ್ತಿಗೆ ಪಸರಿಸುವ ರಾಜ್ಯದ ಮಹತ್ವಾಕಾಂಕ್ಷೆಗೆ ಇದು ಕನ್ನಡಿಯಾಗಿದೆ.
ನಮ್ಮ ನಾಡಿನ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ ಹಾಗೂ ಪ್ರಕೃತಿಯ ಸೊಬಗನ್ನು ಜಗತ್ತಿಗೆ ಪರಿಚಯಿಸಿ, ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮದ ಪ್ರಮುಖ ತಾಣವನ್ನಾಗಿಸುವುದು ನಮ್ಮ ಸಂಕಲ್ಪ. ಪ್ರವಾಸೋದ್ಯಮದ ಬೆಳವಣಿಗೆಯೊಂದಿಗೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ರಾಜ್ಯದ ಆರ್ಥಿಕ ಪ್ರಗತಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.