ಸಚಿವ ಜಮೀರ್ ಅಹ್ಮದ್‌ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು: ಆರ್.ಅಶೋಕ್

R.Ashok: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.

Aug 14, 2026 - 18:34
Aug 14, 2026 - 18:36
ಸಚಿವ ಜಮೀರ್ ಅಹ್ಮದ್‌ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು: ಆರ್.ಅಶೋಕ್

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಒತ್ತಾಯಿಸಿದರು. ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

'ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು ಮಾಡಿದ ತ್ಯಾಗ, ಬಲಿದಾನದಿಂದಾಗಿ ನಾವು ಸ್ವಾತಂತ್ರ್ಯ ಪಡೆದಿದ್ದೇವೆ. ನಾವೆಲ್ಲರೂ ಪ್ರಜಾಪ್ರಭುತ್ವದಲ್ಲಿ ನೆಮ್ಮದಿ, ಸಂತೋಷದಿಂದ ಬದುಕುತ್ತಿದ್ದೇವೆ. ಆದರೆ ವಿಜಯನಗರದ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆ ಮಾಡುವ ವಿಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸಿಎಂಗೆ ಪತ್ರ ಬರೆದಿದ್ದಾರೆ. ಆ.15 ರಂದು ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮನೆ, ಆಸ್ತಿ ಕಳೆದುಕೊಂಡು ಜೈಲಿಗೆ ಹೋಗಿದ್ದರು. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಈ ಸಚಿವರಿಗೆ ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿಲ್ಲ. ಇಂತಹವರನ್ನು ಸಿಎಂ ಡಿ.ಕೆ.ಶಿವಕುಮಾರ್‌ ಸಚಿವರನ್ನಾಗಿ ಮಾಡಿದ್ದಾರೆ' ಎಂದರು. 

'ಇದು ಸಚಿವ ಜಮೀರ್‌ ಅಹ್ಮದ್‌ ದೇಶಕ್ಕೆ ಮಾಡಿರುವ ಅಪಮಾನ. ಸಂವಿಧಾನದಡಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ, ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ರೀತಿ ಮಾಡುವುದು ಸಂವಿಧಾನಕ್ಕೆ ತೋರುವ ಅಗೌರವ. ಇದರಿಂದ ಆಡಳಿತಕ್ಕೆ ಒಳಿತಾಗುವುದಿಲ್ಲ. ಈ ಸಚಿವರ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಎಲ್ಲ ಸಚಿವರು ಹೀಗೆಯೇ ಮಾಡುತ್ತಾರೆ. ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದವರ ವಿರುದ್ಧ ಇನ್ನೂ ಕಠಿಣ ಕ್ರಮ ಆಗಿಲ್ಲ. ಈಗ ಸಚಿವರು ಕೂಡ ದೇಶಕ್ಕೆ ಅಗೌರವ ತೋರಿದ್ದಾರೆ. ಸಚಿವರ ವಿರುದ್ಧ ಕ್ರಮ ವಹಿಸದೇ ಇದ್ದರೆ ಜನರೇ ಬುದ್ಧಿ ಕಲಿಸುತ್ತಾರೆ' ಎಂದು ಹೇಳಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.