ಕದ್ರಿಯ ಮಂಜುನಾಥ ದೇಗುಲಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

CM D.K.Shivakumar: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಇಂದು ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Sep 18, 2026 - 11:47
Sep 18, 2026 - 12:27
ಕದ್ರಿಯ ಮಂಜುನಾಥ ದೇಗುಲಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರು, ಇಂದು ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಮುಂಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಫ್ಲೆಕ್ಸ್‌ಗಳನ್ನು ಹಿಡಿದು, ಮಹಿಳಾ ತಂಡದಿಂದ ಸಿಎಂಗೆ ಶುಭ ಕೋರಲಾಯಿತು.

ದೇವಸ್ಥಾನದಿಂದ ಅವರು, ನೇರವಾಗಿ ಪಡೀಲ್‌ನಲ್ಲಿರುವ ಡಿಸಿ ಕಚೇರಿಯಲ್ಲಿ ಜರುಗುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯ ಭಾಷೆ ಸ್ಥಾನ ನೀಡುವುದು ಸೇರಿದಂತೆ, ಕರಾವಳಿ ಪಾಲಿಗೆ ಬರಪೂರ ಕೊಡುಗೆ ಘೋಷಿಸುವ ಸಾಧ್ಯುತೆಯಿದೆ. ಸಂಪುಟ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಲು ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯನ್ನು ಕೂಡ ಕರೆಯಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.