Mangaluru: ನಾಳೆ ಮಂಗಳೂರಿಗೆ ಸಿಎಂ ಆಗಮನ.. ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಕೆಗೆ ಪೋಲೀಸರ ಸಲಹೆ
Mangaluru: ನಾಳೆ ಮಂಗಳೂರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸುತ್ತಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪೋಲೀಸರು ಸೂಚನೆ ನೀಡಿದ್ದಾರೆ.
ಮಂಗಳೂರು: ನಾಳೆ (ಅ.15) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. 'ಮಂಗಳೂರು ದಸರಾ' ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆ, ಭದ್ರತೆ ಹಾಗೂ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಸಂಜೆ 4 ಗಂಟೆಯಿಂದ ಗಣ್ಯರು ಪ್ರಯಾಣಿಸುವ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಕೋರಿದ್ದಾರೆ.
ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವ ರಸ್ತೆಗಳು:
* ಕೆಪಿಟಿ ವೃತ್ತದಿಂದ - ಕೆಎಸ್ಆರ್ಟಿಸಿ - ಲಾಲ್ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ
* ನಾರಾಯಣಗುರು ವೃತ್ತದಿಂದ ಮಣ್ಣಗುಡ್ಡೆ - ದುರ್ಗಾಮಹಲ್ ಜಂಕ್ಷನ್ - ಕುದ್ರೋಳಿ ದೇವಸ್ಥಾನ - ಅಳಕೆ ಸೇತುವೆ - ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಾಗುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಬಹುದು.
ಈ ಹಿನ್ನೆಲೆ ಮೇಲ್ಕಂಡ ರಸ್ತೆಗಳಲ್ಲಿ ಸಂಚರಿಸುವ ವಾಹನ ಚಾಲಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಸೂಚನೆಗಳು:
* ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧಗಳು ಅಥವಾ ಬದಲಾವಣೆಗಳು ಇರಬಹುದಾಗಿದ್ದು, ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಬೇಕು.
* ಗಣ್ಯರು ಸಂಚರಿಸುವ ರಸ್ತೆಗಳ ಎರಡೂ ಬದಿಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು.
* ಅನಗತ್ಯವಾಗಿ ವಾಹನ ದಟ್ಟಣೆ ಉಂಟಾಗದಂತೆ ಸಹಕರಿಸಬೇಕು ಮತ್ತು ತುರ್ತು ಪ್ರಯಾಣಗಳಿಗೆ ಮುಂಚಿತವಾಗಿ ಯೋಜನೆ ರೂಪಿಸಿಕೊಳ್ಳುವುದು. (ತುರ್ತು ವಾಹನ ಹೊರತುಪಡಿಸಿ).
* ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ನ್ಯೂ-ಚಿತ್ರಾ ಜಂಕ್ಷನ್ - ದುರ್ಗಾ ಮಹಲ್ ಜಂಕ್ಷನ್ವರೆಗೆ ಸಂಚರಿಸದೇ, ಅದೇ ರೀತಿ ದುರ್ಗಾಮಹಲ್ ಜಂಕ್ಷನ್ನಿಂದ ನ್ಯೂಚಿತ್ರಾ ಜಂಕ್ಷನ್ವರೆಗೆ ಸಂಚರಿಸದೇ ಪರ್ಯಾಯ ಮಾರ್ಗವನ್ನು ಉಪಯೋಗಿಸುವುದು.
* ದೇವಸ್ಥಾನಕ್ಕೆ ಬರುವ ಸಾರ್ವಜನಿಕರು ಮಣ್ಣಗುಡ್ಡೆ - ಗಾಂಧಿನಗರ ಅಡ್ಡ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು. ಮೇಲ್ಕಂಡ ಅವಧಿಯಲ್ಲಿ ಕುದ್ರೋಳಿ ಮುಖ್ಯರಸ್ತೆಯಲ್ಲಿ ವಾಹನ ಸಂಚರಿಸಲು/ ನಿಲುಗಡೆಗೆ ಸಾಧ್ಯವಾಗುವುದಿಲ್ಲ.