ಜಪಾನ್‌ನ ಟೊಯೋಟಾ ಉತ್ಪಾದನಾ ಘಟಕಕ್ಕೆ ಸಿಎಂ ಭೇಟಿ

Cm D.K Shivakumar: ಜಪಾನ್‌ನ ಟೊಯೋಟಾ ಉತ್ಪಾದನಾ ಘಟಕಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ.

Nov 23, 2026 - 14:25
Nov 23, 2026 - 14:25
ಜಪಾನ್‌ನ ಟೊಯೋಟಾ ಉತ್ಪಾದನಾ ಘಟಕಕ್ಕೆ ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಜಪಾನ್‌ನ ಮೊಟೊಮಾಚಿ ಘಟಕದಲ್ಲಿ ಟೊಯೋಟಾ (ಕಿರ್ಲೋಸ್ಕರ್) ಮೋಟಾರ್ ಕಾರ್ಪೊರೇಷನ್‌ನ ಸಿಇಒ ಮಸಕಾಜು ಯೋಶಿಮುರಾ ಹಾಗೂ ಹಿರಿಯ ನಾಯಕತ್ವ ತಂಡದೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಟೊಯೋಟಾ ಸಂಸ್ಥೆಯು ತನ್ನ ವಾಹನ ಉತ್ಪಾದನಾ ಸಾಮರ್ಥ್ಯವನ್ನು 10 ಲಕ್ಷಕ್ಕೆ (ಒಂದು ಮಿಲಿಯನ್) ಹೆಚ್ಚಿಸಲು ಯೋಜಿಸಿರುವ ಹಿನ್ನೆಲೆಯಲ್ಲಿ, ಕಂಪನಿಯ ವಿಸ್ತರಣಾ ಯೋಜನೆಗಳಿಗೆ ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಅಲ್ಲದೆ, ಕರ್ನಾಟಕದಲ್ಲಿ ಟೊಯೋಟಾದ ಕೈಗೆಟುಕುವ ದರದ ಹೈಬ್ರಿಡ್ ಎಲೆಕ್ಟ್ರಿಕ್ ಟ್ಯಾಕ್ಸಿ ಮಾದರಿಯನ್ನು ಪರಿಚಯಿಸುವಂತೆ ಉತ್ತೇಜಿಸಿದ ಅವರು, ಫ್ಲೆಕ್ಸ್-ಫ್ಯೂಯಲ್ ವಾಹನಗಳ ಕ್ಷೇತ್ರದಲ್ಲಿನ ಅವಕಾಶಗಳ ಕುರಿತು ಚರ್ಚಿಸಿದರು.

ನಿಯೋಗವು ಮೊಟೊಮಾಚಿ ಉತ್ಪಾದನಾ ಘಟಕ ಮತ್ತು ಟೊಯೋಟಾ ಕೈಕನ್ ಮ್ಯೂಸಿಯಂಗೆ ಭೇಟಿ ನೀಡಿ ಸುಧಾರಿತ ಉತ್ಪಾದನಾ ಪ್ರಕ್ರಿಯೆ, ತಾಂತ್ರಿಕ ನಾವೀನ್ಯತೆ ಹಾಗೂ ಫ್ಯೂಚರ್ ಮೊಬಿಲಿಟಿ ಕುರಿತು ಮಾಹಿತಿ ಪಡೆಯಿತು. 

ಇದೇ ವೇಳೆ, ಟೊಯೋಟಾದ ಗ್ಲೋಬಲ್ ಸ್ಕಿಲ್-ಅಪ್ ಕಾರ್ಯಕ್ರಮದಡಿ ಜಪಾನ್‌ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಕರ್ನಾಟಕದ 20ಕ್ಕೂ ಹೆಚ್ಚು ಐಟಿಐ ಪದವೀಧರರೊಂದಿಗೆ ಮುಖ್ಯಮಂತ್ರಿಗಳು ಸಂವಾದ ನಡೆಸಿದರು.

ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಟೊಯೋಟಾ ನಾಯಕತ್ವ ತಂಡವನ್ನು ಆಹ್ವಾನಿಸಿದ ಮುಖ್ಯಮಂತ್ರಿಗಳು, ರಾಜ್ಯದ ಉತ್ಪಾದನಾ ವಲಯವನ್ನು ಬಲಪಡಿಸಲು, ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಕೌಶಲ್ಯಯುತ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.