ಹಾಸ್ಯ ಕಲಾವಿದ, ಹಿರಿಯ ನಟ ಅತುಲ್ ಪರ್ಚುರೆ ನಿಧನ

ಲಿವರ್ ಕ್ಯಾನ್ಸರ್‌ನಿಂದ ಕಳೆದ ಕೆಲ ವರ್ಷಗಳಿಂದ ಬಳಲುತ್ತಿದ್ದ ಅವರು, ಈಚೆಗೆ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ 57 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು

Oct 15, 2024 - 11:03
ಹಾಸ್ಯ ಕಲಾವಿದ, ಹಿರಿಯ ನಟ ಅತುಲ್ ಪರ್ಚುರೆ ನಿಧನ

ಮುಂಬೈ: ಹಾಸ್ಯ ಪಾತ್ರಗಳ ಮೂಲಕ ಮರಾಠಿ  ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅತುಲ್ ಪರ್ಚುರೆ  ಅವರು ನಿಧನರಾಗಿದ್ದಾರೆ.ಲಿವರ್ ಕ್ಯಾನ್ಸರ್‌ನಿಂದ ಕಳೆದ ಕೆಲ ವರ್ಷಗಳಿಂದ ಬಳಲುತ್ತಿದ್ದ ಅವರು, ಈಚೆಗೆ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ 57 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ತಾಯಿ, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.ಲಿವರ್ ಕ್ಯಾನ್ಸರ್‌ನಿಂದ ಕಳೆದ ಕೆಲ ವರ್ಷಗಳಿಂದ ಬಳಲುತ್ತಿದ್ದ ಅವರು, ಈಚೆಗೆ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ 57 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ತಾಯಿ, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಅತುಲ್ ಅವರು ಕಪಿಲ್ ಶರ್ಮಾ ಅವರ ಹಾಸ್ಯ ಕಾರ್ಯಕ್ರಮ, ಹಿಂದಿಯ ಹಲವಾರು ದೂರದರ್ಶನ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಪ್ರಸಿದ್ಧ ನಟರಾಗಿದ್ದರು. ಟಾಕ್ ಶೋ ಪ್ರದರ್ಶನವೊಂದರಲ್ಲಿ, ಅವರು ತಾವು ಎದುರಿಸುತ್ತಿರುವ ಕ್ಯಾನ್ಸರ್ ರೋಗದ ಬಗ್ಗೆ ಹೇಳಿಕೊಂಡಿದ್ದರು. ಯಕೃತ್ತಿನಲ್ಲಿ 5 ಸೆಂ.ಮೀ ಗೆಡ್ಡೆ ಇದೆ ಎಂದು ಬಹಿರಂಗಪಡಿಸಿದ್ದರು.ಈ ಬಗ್ಗೆ ಅವರು ಮೊದಲೇ ತಿಳಿಸಿದ್ದು, ಆರಂಭದಲ್ಲಿ ಕ್ಯಾನ್ಸರ್ ಚಿಕಿತ್ಸೆ ಆರಂಭಿಸಿದಾಗ ವೈದ್ಯರಿಂದ ಎಡವಟ್ಟಾಗಿ ಸಮಸ್ಯೆ ಎದುರಾಗಿತ್ತು. ನನ್ನ ಮೇದೋಜ್ಜೀರಕ ಗ್ರಂಥಿಯ ಮೇಲೆ ಪರಿಣಾಮ ಬೀರಿತು ಮತ್ತು ವಿವಿಧ ತೊಡಕುಗಳಿಗೆ ಕಾರಣವಾಯಿತು. ತಪ್ಪಾದ ಚಿಕಿತ್ಸೆಯು ವಾಸ್ತವವಾಗಿ ನನ್ನ ಸ್ಥಿತಿಯನ್ನು ಉಲ್ಬಣಗೊಳಿಸಿತು. ನಾನು ನಡೆಯಲು ಸಾಧ್ಯವಾಗಲಿಲ್ಲ ಮತ್ತು ಸ್ಪಷ್ಟವಾಗಿ ಮಾತನಾಡಲು ಕಷ್ಟಪಡುತ್ತಿದ್ದೆ. ಕೊನೆಗೆ ನಾನು ಬೇರೆ ವೈದ್ಯರನ್ನು ಸಂಪರ್ಕಿಸಿದೆ. ಸೂಕ್ತವಾದ ಔಷಧಿ ಮತ್ತು ಕೀಮೋಥೆರಪಿಯನ್ನು ಪಡೆದುಕೊಂಡೆ ಎಂದು ಹೇಳಿಕೊಂಡಿದ್ದರು.   

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.