Commonwealth Games-2026: ಭಾರತಕ್ಕೆ ಮೊದಲ ಪದಕ

Commonwealth Games-2026: ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋ ನಗರದಲ್ಲಿ 23ನೇ ಕಾಮನ್‌ವೆಲ್ತ್ ಕ್ರೀಡಾಕೂಟ-2026ರಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ.

Jul 25, 2026 - 14:19
Commonwealth Games-2026: ಭಾರತಕ್ಕೆ ಮೊದಲ ಪದಕ

ಗ್ಲ್ಯಾಸ್ಗೋ: ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋ ನಗರದಲ್ಲಿ 23ನೇ ಕಾಮನ್‌ವೆಲ್ತ್ ಕ್ರೀಡಾಕೂಟ-2026 (Commonwealth Games-2026) ನಡೆಯುತ್ತಿದ್ದು,  ಭಾರತಕ್ಕೆ ಮೊದಲ ಪದಕ ಲಭಿಸಿದೆ.

ಪುರುಷರ ಹೆವಿವೇಯ್ಟ್‌ ಪ್ಯಾರಾ ಪವರ್‌ಲಿಫ್ಟಿಂಗ್‌ ವಿಭಾಗದಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ (Jhandu Kumar) ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.

28 ವರ್ಷದ ಅವರು, 181 ಕೆಜಿ ಹಾಗೂ 190 ಕೆಜಿ ಭಾರ ಎತ್ತಿ 130.9 ಅಂಕಗಳನ್ನು ಗಳಿಸಿದರು. ಆದಾಗ್ಯೂ 196 ಕೆಜಿ ಎತ್ತುವಲ್ಲಿ ವಿಫಲರಾದರು. ಇದರೊಂದಿಗೆ ಈ ಪದಕವನ್ನು ಗೆದ್ದಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಭಾರತೀಯ ಕ್ರೀಡಾಪಟು ಸುಧೀರ್ (114.1 ಅಂಕ) 6ನೇ ಸ್ಥಾನ ಪಡೆದರು.

ಝಂದು ಕುಮಾರ್ ಮೂಲತಃ ಬಿಹಾರ ರಾಜ್ಯದವರಾಗಿದ್ದಾರೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಪಾಲ್ಗೊಂಡ ಆ ರಾಜ್ಯದ ಮೊದಲ ಪ್ಯಾರಾ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.