ದಿನ ಭವಿಷ್ಯ: ಆಗಸ್ಟ್ 1, 2026.. ಯಾವ ರಾಶಿಗೆ ಏನು ಫಲ?
Daily Horoscope: ಇಂದು (ಶನಿವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಶನಿಯ ವಕ್ರಗತಿಯಿಂದಾಗಿ ಕೊಂಚ ಸಮಾಧಾನ... ಉದ್ಯೋಗದಲ್ಲಿ ಸ್ಥಿರತೆ ಪ್ರಾಪ್ತಿ.. ವಿಶೇಷ ಸಾಧನೆ ಮಾಡಿದ ಆನಂದ. ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ವೃಷಭ:
ಆತ್ಮವಿಮರ್ಶೆ ಬೇಕು, ಆತ್ಮನಿಂದನೆ ಬೇಡ.. ಒಂದು ಕೆಲಸ ಮುಗಿದ ಬಳಿಕವೇ ಇನ್ನೊಂದಕ್ಕೆ ಕೈಹಾಕಿ. ನೆರವು ಕೋರಿಕೆಗೆ ಸಕಾಲದಲ್ಲಿ ಸ್ಪಂದನ. ವ್ಯವಹಾರ ನಿಮಿತ್ತ ಸಣ್ಣ ಪ್ರವಾಸದ ಸಾಧ್ಯತೆ. ಸಂಸಾರದಲ್ಲಿ ಎಲ್ಲರಿಗೂ ಸಮಾಧಾನದ ಅನುಭವ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ರಾಮರಕ್ಷಾ ಸ್ತೋತ್ರ ಓದಿ.
ಮಿಥುನ:
ವಾರದ ಮುಖ್ಯ ಕೆಲಸಗಳ ಹಿನ್ನೋಟ.. ಸೇವಾ ಹಿರಿತನಕ್ಕೆ ಮಾನ್ಯತೆ. ಸಣ್ಣ ಉದ್ಯಮಗಳಿಗೆ ಶುಭದಿನ. ಮಹಿಳೆಯರ ನೇತೃತ್ವದ ಗೃಹೋದ್ಯಮಗಳು ಪ್ರಗತಿಯಲ್ಲಿ. ವ್ಯವಹಾರ ನಿಮಿತ್ತ ಪ್ರಮುಖರ ಭೇಟಿ. ಗಣೇಶ ಅಷ್ಟಕ, ದತ್ತಪಂಜರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಕರ್ಕಾಟಕ:
ಆತ್ಮವಿಶ್ವಾಸವನ್ನು ವರ್ಧಿಸುವ ವಿದ್ಯಮಾನಗಳು.. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಅರಸುತ್ತಿರುವವರ ಪ್ರಯತ್ನ ಸಫಲ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
ಸಿಂಹ:
ಸರಳ ವಿಧಾನ ಬಳಕೆಯಿಂದ ಯಶಸ್ಸು.. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ. ಗೃಹೋತ್ಪನ್ನ ಖಾದ್ಯಪದಾರ್ಥಗಳ ಮಾರಾಟದಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಅಷ್ಟಕ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
ಕನ್ಯಾ:
ವಿಶ್ವಾಸದ ಜಾಗದಲ್ಲಿ ಕರ್ತವ್ಯಪಾಲನೆ.. ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ಉಪಕರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ತುಲಾ:
ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು.. ಸಹಚರರಿಂದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ. ಆಹಾರ ಸೇವನೆಯಲ್ಲಿ ಎಚ್ಚರ.ಗಣೇಶ ಸ್ತೋತ್ರ, ವೇದಸಾರ ಶಿವಸ್ತೋತ್ರ, ನವಗ್ರಹ ಸ್ತೋತ್ರ ಓದಿ.
ವೃಶ್ಚಿಕ:
ಉದ್ಯೋಗದಲ್ಲಿ ಕ್ರಮಾಗತ ಪ್ರಗತಿ.. ಸಣ್ಣ ಉದ್ಯಮಗಳ ಬೆಳವಣಿಗೆ ತೃಪ್ತಿಕರ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
ಧನು:
ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ.. ಹೊಸ ಗೆಳೆಯರ ಸಂಪಾದನೆ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ.ಕೃಷಿ ಕ್ಷೇತ್ರದಲ್ಲಿ ಕಾರ್ಯ ತೃಪ್ತಿಕರ .ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
ಮಕರ:
ಸಮಸ್ಯೆಗಳಿಂದ ಬಿಡುಗಡೆಯಾದ ಸಮಾಧಾನ.. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಹನುಮಸನ್ ಚಾಲೀಸಾ ಓದಿ.
ಕುಂಭ:
ನಾಳೆಯ ಸೇವಾಕಾರ್ಯಗಳ ಚಿಂತನೆ ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ.. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಗಣೇಶ ಕವಚ, ದಕ್ಷಿಣಾಮೂರ್ತಿ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಅರ್ಧದಲ್ಲಿ ನಿಂತ ಕಾರ್ಯ ಪುನರಾರಂಭ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.