ದಿನ ಭವಿಷ್ಯ: ಇಂದು ಯಾರಿಗೆ ಶುಭ ಫಲ?

Daily Horoscope: ಇಂದು (ಶನಿವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Aug 15, 2026 - 09:55
ದಿನ ಭವಿಷ್ಯ: ಇಂದು ಯಾರಿಗೆ ಶುಭ ಫಲ?

ಮೇಷ:

ಕೈಹಾಕಿದಲ್ಲೆಲ್ಲಾ ಯಶಸ್ಸು.. ಉದ್ಯೋಗ ಸ್ಥಾನದಲ್ಲಿ ಕಿರಿಯರಿಂದ ಗೌರವ. ಕೃಷ್ಯುತ್ಪನ್ನಗಳಿಂದ ಲಾಭ. ದೂರ ದೇಶದಲ್ಲಿರುವ ಮಕ್ಕಳಿಂದ ಸಂತೋಷದ ಸಮಾಚಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗಣೇಶ ಕವಚ, ಸುಬ್ರಹ್ಮಣ್ಯ ಸ್ತೋತ್ರ, ಶನಿಮಹಾತ್ಮೆ ಓದಿ.

ವೃಷಭ:

ಎಲ್ಲೆಡೆ  ಹೊಸಬರಿಗೆ ಅನುಕೂಲ.. ಖಾದಿ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶ್ರಮಿಕ ವರ್ಗಕ್ಕೆ ಅನುಕೂಲವಾದ ವಾತಾವರಣ. ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿ. ಕೇಟರಿಂಗ್ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.

ಮಿಥುನ:

ಉದ್ಯೋಗದಲ್ಲಿ ಭದ್ರತೆ, ವೇತನ ಏರಿಕೆ ಸಂಭವ.. ಮಾತಿನಲ್ಲಿ ತಪ್ಪದಂತೆ ಎಚ್ಚರಿಕೆ ಇರಲಿ. ಮೊಂಡುವಾದ ಮಾಡುವವರೊಡನೆ ಜಗಳ ಬೇಡ. ಹಿತಶತ್ರುಗಳ ವಿಷಯದಲ್ಲಿ ಎಚ್ಚರ ಇರಲಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಪಂಚರತ್ನ, ನರಸಿಂಹ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕರ್ಕಾಟಕ:

ಪರಿಶ್ರಮಕ್ಕೆ ಸಮಾನವಾದ ಗುಣವಿಲ್ಲ.. ಉದ್ಯೋಗಸ್ಥರ ಆರ್ಥಿಕ ತೊಂದರೆ ಪರಿಹಾರ. ಉದ್ಯಮಗಳಿಗೆ ಅನಾಯಾಸವಾಗಿ ನೆರವು. ಭ್ರಷ್ಟ ರಾಜಕಾರಣಿಗಳ ಕುತಂತ್ರ ಬಯಲು..ಮಹಿಳೆಯರ ಸ್ವೋದ್ಯೋಗ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಗಣೇಶ ಅಷ್ಟಕ, ದತ್ತಪಂಜರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಸಿಂಹ:

ಕೈಕೆಳಗಿನವರ ಪೂರ್ಣ ಸಹಕಾರ.. ಹಲವು  ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

ಕನ್ಯಾ:

ಹೊಸ ಪ್ರತಿಭೆಗಳ ಅನ್ವೇಷಣೆ.. ಹೊಸ ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ. ಪ್ರತಿಭೆ  ಹಾಗೂ ಕಾರ್ಯನಿಷ್ಠೆಗೆ ಮಾಲಿಕರಿಂದ ಶ್ಲಾಘನೆ.   ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆಯ  ಗೋಚರ. ಕುಟುಂಬದ ಸದಸ್ಯರಿಗೆ ಆನಂದೋತ್ಸಾಹ. ಸಂಕಷ್ಟನಾಶನ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

ತುಲಾ:

ಉದ್ಯೋಗ, ಉದ್ಯಮಗಳಲ್ಲಿ ಒಳ್ಳೆಯ ಹೆಸರು.. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸಕಾಲಿಕ ಮಾರ್ಗದರ್ಶನ. ಲೇವಾದೇವಿ ವ್ಯವಹಾರ ಬೇಡ. ಸಂಸಾರದಲ್ಲಿ ಹುಳಿ ಹಿಂಡುವವರಿಗೆ ಯೋಗ್ಯ ಪಾಠ. ಹಿರಿಯರ ಆಸ್ತಿ ಜೋಪಾನಕ್ಕೆ ಕ್ರಮ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದೇವೀಕವಚ, ಓದಿ.

ವೃಶ್ಚಿಕ:

ವೃತ್ತಿಪರ ಉದ್ಯೋಗಸ್ಥರಿಗೆ ಅನುಕೂಲ.. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿ ಇಲ್ಲ. ಸರ್ಕಾರಿ ಅಧಿಕಾರಿಗಳ ಆತಂಕ ಕೊಂಚ ದೂರ. ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣೇಶ ಪಂಚರತ್ನ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಧನು:

ಉದ್ಯೋಗ  ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ.. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು ದೊರಕಿಸಲು ಸಹಾಯ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಸಂಸಾರದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಗಣೇಶ ಅಷ್ಟಕ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಮಕರ:

ಸ್ಥಿರ ಮನಸ್ಸಿನ ಪ್ರಯತ್ನಗಳಿಗೆ ಜಯ.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿಗೆ ಧನವ್ಯಯ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಗಣೇಶ ಸ್ತೋತ್ರ, ವೇದಸಾರ ಶಿವಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ.

ಉದ್ಯೋಗಸ್ಥರಿಗೆ ಹಠಾತ್ ಧನಲಾಭ.. ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು. ಕೃಷಿ ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.

ಮೀನ:

ಸಹಚರರಿಂದ ವಿಶೇಷ ಸಹಾಯ.. ಹಿರಿಯರ ಸಕಾಲಿಕ ಸ್ಪಂದನ. ಉದ್ಯಮ ಅಭಿವೃದ್ಧಿಗೆ ಹೊಸ ಯೋಜನೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರ ಆರೋಗ್ಯದತ್ತ ಗಮನವಿರಲಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.