ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ?
Daily Horoscope: ಇಂದು (ಶುಕ್ರವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ದೇವಿಯ ಅನುಗ್ರಹವನ್ನು ಕರುಣಿಸುವ ಶುಕ್ರವಾರ.. ಸಂಸಾರದ ಆವಶ್ಯಕತೆಗಳ ಕಡೆಗೆ ಗಮನ. ಕುಟುಂಬದಲ್ಲಿ ಎಲ್ಲರಿಗೂ ಆನಂದ. ಹಿರಿಯರಿಗೆ,ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿ ಜಯ.ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಉದ್ಯೋಗಸ್ಥಾನದಲ್ಲಿ ಸದವಕಾಶ ಪ್ರಾಪ್ತಿ.. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ. ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ.ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಋಣಮೋಚನ ಮಂಗಲಸ್ತೋತ್ರ ಓದಿ.
ಮಿಥುನ:
ಎಲ್ಲವೂ ನಿಮ್ಮ ಇಚ್ಛೆಯಂತೆ ನಡೆತುತ್ತದೆ.. ತಾವಾಗಿ ಬಂದ ಅವಕಾಶಗಳ ಸದುಪಯೋಗ ಅವಶ್ಯ. ಉದ್ಯೋಗಾನ್ವೇಷಿಗಳಿಗೆ ಅನುಕೂಲ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ.ಸಂಗೀತ ಶ್ರವಣದಲ್ಲಿ ಕಾಲಯಾಪನೆ. ಸಂಕಷ್ಟನಾಶನ ಗಣೇಶ ಸ್ತೋತ್ರ, ದೇವೀಕವಚ, ಗುರುಸ್ತೋತ್ರ ಓದಿ.
ಕರ್ಕಾಟಕ:
ನಿರೀಕ್ಷಿತ ಧನ ಕೈಸೇರಿ ನೆಮ್ಮದಿ.. ನೊಂದವರಿಗೆ ಧೈರ್ಯ ತುಂಬುವ ಮಾತುಗಳು ಬರಲಿ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ.ಅಪರೂಪದ ನೆಂಟರ ಆಗಮನ. ಗಣಪತಿ ಅಥರ್ವಶೀರ್ಷ, ದಾರಿದ್ರ್ಯದಹನ ಶಿವಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಸಿಂಹ:
ವಿಘ್ನಗಳಿಂದ ಮುಕ್ತಿಯಾಗಿ ನೆಮ್ಮದಿ. ಪತಿ-ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ಸಂತಸದ ವಾತಾವರಣ. ದೂರದೇಶದಲ್ಲಿರುವ ಮಕ್ಕಳೊಡನೆ ಸಂಭಾಷಣೆ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.
ಕನ್ಯಾ:
ದೈಹಿಕ ಆಪತ್ತು ನಿವಾರಣೆ.. ವೃತ್ತಿಪರ ಉದ್ಯೋಗಸ್ಥರಿಗೆ ಕೊಂಚ ಕಿರಿಕಿರಿ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಿಂದ ಬಂದ ಬಂಧುಗಳ ಭೇಟಿ. ಗಣೇಶ ಪಂಚರತ್ನ, ದತ್ತಾತ್ರೇಯ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
ತುಲಾ:
ದೇಹ, ಮನಸ್ಸುಗಳಿಗೆ ನೆಮ್ಮದಿ.. ಸಮಯಸಾಧಕರ ಪರಾಭವ. ನೂತನ ನಿವೇಶನ ಖರೀದಿ ಸಾಧ್ಯತೆ. ಗೃಹೋದ್ಯಮಗಳಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ. ಗಣೇಶ ತ್ರಿಶತಿ ಸ್ತೋತ್ರ, ವೇದಸಾರ ಶಿವಸ್ತೋತ್ರ, ಗೌರೀದಶಕ ಓದಿ.
ವೃಶ್ಚಿಕ:
ಉದ್ಯೋಗ, ವ್ಯವಹಾರಗಳಿಗೆ ನೆಮ್ಮದಿ.. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
ಧನು:
ಪರಿಚಿತರಿಂದ ಅಯಾಚಿತ ಸಹಾಯ.. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ವಕಟೇಶ್ವರ ಸ್ತೋತ್ರ , ಹನುಮತ್ಕವಚ ಓದಿ.
ಮಕರ:
ನಿರೀಕ್ಷೆಗಿಂತ ಸುಲಭವಾಗಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ. ಹತ್ತಿರದ ದೇವೀಕ್ಷೇತ್ರಕ್ಕೆ ಸಂದರ್ಶನ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು.. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಅವಕಾಶ ಸೃಷ್ಟಿ. ಗಣಪತಿ ಅಥರ್ವಶೀರ್ಷ, ದಕ್ಷಿಣಾಮೂರ್ತಿ ಸ್ತೋತ್ರ ಶನಿಮಹಾತ್ಮೆ ಓದಿ.
ಮೀನ:
ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ.. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ.ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ. ವಾಸಸ್ಥಾನ ನವೀಕರಣ ಮುಕ್ತಾಯದ ಹಂತದಲ್ಲಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.