ದಿನ ಭವಿಷ್ಯ: ಇಂದು ಯಾವ ರಾಶಿಗೆ ಏನು ಫಲ?
Daily Horoscope: ಇಂದು (ಶನಿವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ವಿರಾಮದ ದಿನ ಎಲ್ಲೆಡೆ ಆನಂದಾನುಭವ.. ಅವಶ್ಯವುಳ್ಳವರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ಕುಟುಂಬದಲ್ಲಿ ಹರ್ಷೋಲ್ಲಾಸದ ಕ್ಷಣ. ಹಿರಿಯರಿಗೆ,ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ. ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿ ಜಯ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ವೃಷಭ:
ಸಂಘಟನಾ ಶಕ್ತಿಯನ್ನು ದೃಢಪಡಿಸಿದ ಹೆಗ್ಗಳಿಕೆ.. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ. ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
ಮಿಥುನ:
ಪರಿಸರವನ್ಜು ಒಲಿಸಿಕೊಂಡು ಸಾಗಿರಿ.. ಸಿಕ್ಕಿದ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಉದ್ಯೋಗಾನ್ವೇಷಿಗಳಿಗೆ ಅನುಕೂಲ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ಕೈಜೋಡಿಸಿ ಸಾರ್ಥಕ ಭಾವ. ಸಂಕಷ್ಟನಾಶನ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
ಕರ್ಕಾಟಕ:
ಅವಕಾಶಗಳ ಸದುಪಯೋಗ.. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ನೊಂದವರಿಗೆ ಧೈರ್ಯ ತುಂಬುವ ಮಾತುಗಳು ಬರಲಿ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ. ಗಣೇಶ ಕವಚ, ನರಸಿಂಹ ಸ್ತೋತ್ರ, ನವಗ್ರಹ ಮಂಗಲಾಷ್ಟಕ ವ ಓದಿ.
ಸಿಂಹ:
ಅತಂತ್ರ ಸ್ಥಿತಿಯಿಂದ ವಿಮೋಚನೆ.. ಪತಿ- ಪತ್ನಿಯರಿಂದ ಪರಸ್ಪರ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ಸಂತಸದ ವಾತಾವರಣ. ವ್ಯವಹಾರ ಸಂಬಂಧ ಸಣ್ಣಪ್ರಯಾಣ ಸಂಭವ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ ಕಾರ್ತಿಕೇಯ ಸ್ತೋತ್ತ ಓದಿ.
ಕನ್ಯಾ:
ಆಪತ್ತುಗಳು ತೊಲಗಿ ನೆಮ್ಮದಿ.. ವೃತ್ತಿಪರ ಉದ್ಯೋಗಸ್ಥರಿಗೆ ಕೊಂಚ ಕಿರಿಕಿರಿ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಿಂದ ಬಂದ ಬಂಧುಗಳ ಭೇಟಿ. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ತುಲಾ:
ದೈಹಿಕ ಆರೋಗ್ಯ ಸುಧಾರಣೆ.. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ. ನೂತನ ವಾಹನ ಖರೀದಿ ಸಾಧ್ಯತೆ. ಗೃಹೋದ್ಯಮಗಳಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ವೃಶ್ಚಿಕ:
ನೆಮ್ಮದಿಯಲ್ಲಿ ಕಳೆಯುವ ದಿನ.. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
ಧನು:
ಪರಿಚಿತರಿಂದ ಅಯಾಚಿತ ಸಹಾಯ.. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಗಣೇಶ ದ್ವಾದಶನಾಮ ಸ್ತೋತ್ರ, ದತ್ತಪಂಜರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.ಗಣೇಶ. ಅಷ್ಟಕ, ವಿಷ್ಣು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
ಮಕರ:
ನಿರೀಕ್ಷೆಗಿಂತ ಸುಲಭವಾಗಿ ಕಾರ್ಯಸಾಧನೆ.. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ. ಹತ್ತಿರದ ವಿಷ್ಣುಕ್ಷೇತ್ರಕ್ಕೆ ಸಂದರ್ಶನ. ಗಣೇಧ ಕವಚ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು.. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಅವಕಾಶ ಸೃಷ್ಟಿ.ಗಣೇಶ ತ್ರಿಶತಿ ಸ್ತೋತ್ರ, ದಕ್ಷಿಣಾಮೂರ್ತಿ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಉದ್ಯೋಗ, ವ್ಯವಹಾರ ಕ್ಷೇತ್ರಗಳಿಗೆ ವಿರಾಮ.. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ. ಬಂಧುವರ್ಗದಲ್ಲಿ ದೇವತಾ ಕಾರ್ಯ. ಗಷೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.