ದಿನ ಭವಿಷ್ಯ: ಜುಲೈ 21, 2026.. ಇಂದು ಹೇಗಿದೆ?

Daily Horoscope: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Jul 21, 2026 - 06:48
ದಿನ ಭವಿಷ್ಯ: ಜುಲೈ 21, 2026..  ಇಂದು ಹೇಗಿದೆ?

ಮೇಷ:

ಯಶಸ್ಸಿಗೆ ತಡೆಯೊಡ್ಡಲು ಕೆಲವರ  ವಿಫಲ ಪ್ರಯತ್ನ. .ಉದ್ಯೋಗ ಸ್ಥಾನದಲ್ಲಿ ಸಾಧನೆ ನಿರಾತಂಕ.....ಹೊಸ ಹೂಡಿಕೆಗಳಲ್ಲಿ ಲಾಭದ ಸೂಚನೆ.. ಮಹಿಳಾ ಉದ್ಯಮಿಗಳಿಗೆ ಯಶಸ್ಸು.ಸಚ್ಚಾರಿತ್ರ್ಯ ಮೆರೆದ ನಾಯಕರಿಗೆ ವಿಜಯ.ಗಣೇಶ ಕವಚ, ಶಿವಸಹಸ್ರನಾಮ, ಶನಿಮಹಾತ್ಮೆ ಓದಿ.

ವೃಷಭ:

ಇದು ಯಶಸ್ಸು ತರುವ ಮಂಗಳವಾರ...  ಖಾದಿ ಉಡುಪು  ವ್ಯಾಪಾರಿಗಳಿಗೆ ಹೇರಳ ಲಾಭ. .ದುಡಿಯುವವರಿಗೆ  ಅನುಕೂಲ ವಾತಾವರಣ. ಕೇಟರಿಂಗ್ ವ್ಯವಹಾರಸ್ಥರಿಗೆ ಉತ್ತಮ ಲಾಭ.ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿ.ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.

ಮಿಥುನ:

ಪಾಲುದಾರರ ನಡುವೆ  ಹೊಂದಾಣಿಕೆ. . ದೂರ ಪ್ರಯಾಣ ಮಾಡುವುದು ಬೇಡ.ಹಿತ ಶತ್ರುಗಳ ವಿಷಯದಲ್ಲಿ ಎಚ್ಚರ ಇರಲಿ.   ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.ಲೇಖಕರಿಗೆ ಏಕಾಗ್ರತೆಯ ಕೊರತೆ.ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ಆದಿತ್ಯ ಹೃದಯ ಓದಿ.

ಕರ್ಕಾಟಕ:

ದೃಢವಾದ ಹೆಜ್ಜೆಗಳು.. ಹಳೆಯ ಆರ್ಥಿಕ ತೊಂದರೆ  ಪರಿಹಾರ... ಉದ್ಯಮಗಳಿಗೆ ಅನಾಯಾಸವಾಗಿ ನೆರವು. .ಮಹಿಳಾ ಉದ್ಯಮಿಗಳಿಗೆ ಸಾಂಸ್ಥಿಕ ನೆರವು ಲಭ್ಯ.
ಹಿರಿಯರಿಗೆ ಮನೋಬಲದಿಂದ ಆರೋಗ್ಯ ಪ್ರಾಪ್ತಿ.ಗಣೇಶ ದ್ವಾದಶನಾಮ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.

ಸಿಂಹ:

ವ್ಯವಹಾರಗಳು ಪಾರದರ್ಶಕವಾಗಿರಲಿ... ಹಲವು  ದಿಕ್ಕುಗಳಿಗರ ಗಮನ ಹರಿಸಲು  ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಸಿವಿಲ್ ಎಂಜಿನಿಯರರಿಗೆ ಅನುಕೂಲದ ದಿನ.ನ್ಯಾಯಾಲಯದಲ್ಲಿರುವ ವ್ಯಾಜ್ಯ ಮುಂದಕ್ಕೆ.ಗಣೇಶ ಪಂಚರತ್ನ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಕನ್ಯಾ:

ಹೊಸ ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ.ಪ್ರತಿಭೆ  ಹಾಗೂ ಕಾರ್ಯನಿಷ್ಠೆಗೆ ಉನ್ನತರ ಮೆಚ್ಚುಗೆ.    ಉದ್ಯೋಗ ಅರಸುವವರಿಗೆ    ಭರವಸೆಯ ಆಶಾಕಿರಣ...ದೂರದೂರಿಗೆ ಅನಿವಾರ್ಯ ಪ್ರಯಾಣ. ಅಧ್ಯಾಪಕರ ಆತಂಕ ನಿವಾರಣೆ.ಸಂಕಷ್ಟನಾಶನ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ತುಲಾ:

ವೃತ್ತಿಕ್ಷೇತ್ರದಲ್ಲಿ ಸಹಜವಾದ ಪೈಪೋಟಿಗಳು. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ  ಶುಭಸೂಚನೆ. .ಲೇವಾದೇವಿ ವ್ಯವಹಾರ ಬೇಡ..ಸಂಸಾರದಲ್ಲಿ ಹುಳಿ ಹಿಂಡುವವರಿಗೆ ಯೋಗ್ಯ ಪಾಠ. ಹಿರಿಯರ ಆಸ್ತಿ ಜೋಪಾನಕ್ಕೆ ಕ್ರಮ.ಗಣೇಶ ಅಷ್ಟಕ, ದತ್ತಪಂಜರ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

ವೃಶ್ಚಿಕ:

ಎಲ್ಲ ಬಗೆಯ ವೃತ್ತಿಗಳವರಿಗೆ ಹಿತಾನುಭವ.. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿ ಇಲ್ಲ... ಸರಕಾರಿ ಅಧಿಕಾರಿಗಳಿಗೆ ಪುಢಾರಿಗಳ ಕಾಟ... ಉನ್ನತ ರಾಜಕಾರಣಿಗಳಿಗೆ ಅಧಿಕಾರ ದಾಹ. ..ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ.
ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಧನು:

ಪ್ರತಿಭೆ ಕೌಶಲಗಳ ಮೇಲುಗೈ.. . ಉದ್ಯೋಗ  ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ ..ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಹಿರಿಯರ ಆರೋಗ್ಯದ ಕುರಿತು ಕಾಳಜಿ. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ

ಮಕರ:

ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸುವ ಪ್ರಯತ್ನ.. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ  ವಿಜಯ.  ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ...ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.ಮಕ್ಕಳನ್ನು ಸಾಕುಪ್ರಾಣಿಗಳಿಂದ ದೂರವಿಡಿ.ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ.

ಉದ್ಯೋಗಸ್ಥರಿಗೆ ಸಹಜವಾದ ಅನುಭವ.ಸರಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು..ಲೇವಾದೇವಿ ವ್ಯವಹಾರದಲ್ಲಿ ನಷ್ಟ.. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತೃಪ್ತಿಯ ಅನುಭವ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣಪತಿ ಅಥರ್ವಶೀರ್ಷ, ವೇದಸಾರ ಶಿವಸ್ತೋತ್ರ, ಶನಿಮಹಾತ್ಮೆ ಓದಿ.

ಮೀನ:

ಹಿರಿಯ ಅಧಿಕಾರಿಗಳಿಂದ ಸರ್ವವಿಧ ಸಹಾಯ..ಎಲ್ಲ ಬಗೆಯ ಕಾರ್ಯಗಳು ಪ್ರಗತಿಯಲ್ಲಿ.ವಾಹನ ಸಂಬಂಧಿ ಉದ್ಯಮಿಗಳಿಗೆ ಅನುಕೂಲ.  ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಕಡೆಗೆ ಪ್ರಯತ್ನ ಅವಶ್ಯ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.