ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?

Daily Horoscope: ಇಂದು (ಗುರುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Nov 5, 2026 - 07:57
ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ ಫಲ?

ಮೇಷ:

ನಿರ್ದಿಷ್ಟ ಪರಿಸ್ಥಿತಿಗಳಲ್ಲಿ ಜಯ.. ಉದ್ಯೋಗ ಸ್ಥಾನದಲ್ಲಿ ಹೆಚ್ಚು ಅನುಕೂಲ.. ಹೋಟೆಲ್ ಉದ್ಯಮಿಗಳಿಗೆ ಸ್ವಲ್ಪ ನೆಮ್ಮದಿ. ದೂರ ದೇಶದಲ್ಲಿರುವ ಮಕ್ಕಳಿಂದ ಸಂತೋಷದ ಸಮಾಚಾರ. ಮಹಿಳೆಯರ ಉದ್ಯಮಗಳಿಗೆ ಕೀರ್ತಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

ವೃಷಭ:

ಸಾಕಾರಗೊಳ್ಳುವ. ಕಲ್ಪನೆಗಳು. ಉದ್ಯೋಗಸ್ಥರಿಂದ ಹೊಸ ಅವಕಾಶಗಳ ಸದುಪಯೋಗ. ಖಾದಿಯ ಸಿದ್ಧ ಉಡುಪು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ನರ್ಸಿಂಗ್ ಶಿಕ್ಷಣ  ಪಡೆದವರಿಗೆ ಉದ್ಯೋಗಾವಕಾಶ. ದೀರ್ಘಕಾಲದ  ವೈಮನಸ್ಸು ಮುಗಿದು ಆನಂದ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಆದಿತ್ಯ ಹೃದಯ ಓದಿ.

ಮಿಥುನ: 

ಇಚ್ಛಾಶಕ್ತಿಯಿಂದ ಇಷ್ಟಾರ್ಥ ಸಿದ್ಧಿ. ತಾತ್ಕಾಲಿಕ ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಶುಭ ನುಡಿಯಿಂದ ಪರರಿಗೆ ಆನಂದ ಯುವಜನರಿಗೆ ಧಾರ್ಮಿಕ ಮಾರ್ಗದರ್ಶನದ ವ್ಯವಸ್ಥೆಯ ನೇತೃತ್ವ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣೇಶ ಪಂಚರತ್ನ, ಶಿವಪಂಚಾಕ್ಷರ ಸ್ತೋತ್ರ, ಗುರುಸ್ತೋತ್ರ ಓದಿ.

ಕರ್ಕಾಟಕ:

ನೇರ ಮಾರ್ಗವನ್ನು ಅನುಸರಿಸಿ ಕಾರ್ಯ ಸಾಧನೆ.. ಉದ್ಯೋಗಸ್ಥರ ಆರ್ಥಿಕ ತೊಂದರೆ ಪರಿಹಾರ. ಉದ್ಯಮಗಳಿಗೆ ಸರ್ಕಾರಿ ಸಬ್ಸಿಡಿ ಲಭ್ಯ. ಮಹಿಳೆಯರ ಸ್ವೋದ್ಯೋಗ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಸಂಕಷ್ಟನಾಶನ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಸಿಂಹ:

ಅನಿವಾರ್ಯವಾದ ಹೊಸ ಜವಾಬ್ದಾರಿಗಳು.. ಒಂದಕ್ಕಿಂತ ಹೆಚ್ಚು ವ್ಯವಹಾರಗಳತ್ತ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ.ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಆಧ್ಯಾತ್ಮಿಕ ಗುರುಗಳ ಭೇಟಿ ಸಂಭವ. ಗಣೇಶ ಅಷ್ಟಕ, ದತ್ತಪಂಜರ ಸ್ತೋತ್ರ, ಆದಿತ್ಯ ಹೃದಯ ಓದಿ.

ಕನ್ಯಾ:

ವೃತ್ತಿ ಪರಿಣತಿಯಿಂದ ಸರ್ವವಿಧ ಲಾಭ.. ಹೊಸ ಕಾರ್ಯಕ್ಷೇತ್ರದಲ್ಲಿ ಎಲ್ಲರ ಸಹಕಾರ. ಪ್ರತಿಭೆ ಹಾಗೂ ಹಾಗೂ ಕಾರ್ಯನಿಷ್ಠೆಗೆ ಮಾಲಿಕರಿಂದ ಶ್ಲಾಘನೆ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆ ಸಿಗುವ  ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಗಣಪತಿ ಅಥರ್ವಶೀರ್ಷ, ನರಸಿಂಹ ಕವಚ, ಲಕ್ಷ್ಮೀಸ್ತೋತ್ರ ಓದಿ.

ತುಲಾ:

ನಯವಂಚಕರಿಂದ ತೊಂದರೆ.. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಸ್ವಲ್ಪ ಸಡಿಲು. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸಕಾಲಿಕ ಮಾರ್ಗದರ್ಶನ. ಹುಟ್ಟೂರಿನ ಅಭಿವೃದ್ಧಿ ಕಾರ್ಯದಲ್ಲಿ ಭಾಗಿ. ಒಡಹುಟ್ಡುಗಳ ಪ್ರೀತಿ ಗಳಿಸುವ ಪ್ರಯತ್ನ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಗೌರೀದಧಕ ಓದಿ.

ವೃಶ್ಚಿಕ:

ಎಲ್ಲ ಬಗೆಯ ಪರಿಸ್ಥಿತಿಗಳಲ್ಲೂ ಅನುಕೂಲದ ಪರಿಣಾಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿ ಇಲ್ಲ. ಸರ್ಕಾರಿ ಅಧಿಕಾರಿಗಳ ಆತಂಕ ಕೊಂಚ ದೂರ. ರಾಜಕಾರಣಿಗಳಿಗೆ ಬಿಗಿಯಾದ ಇಕ್ಕಟ್ಟಿನ ಪರಿಸ್ಥಿತಿ..ವಸ್ತ್ರ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಧನು:

ಹುಟ್ಡಿನಿಂದ ಬಂದ ಉದ್ಯಮಶೀಲತೆಗೆ ಸಹಚರರ ಮೆಚ್ಚುಗೆ.. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು ದೊರಕಿಸಲು ಸಹಾಯ. ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಅವಿವಾಹಿತರಿಗೆ ವಿವಾಹ ಯೋಗ. ಗಣೇಶ ಪಂಚರತ್ನ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಮಕರ:

ಸಂದಿಗ್ಧ ಪರಿಸ್ಥಿತಿಗಳಿಂದ ಸದ್ಯಕ್ಕೆ ಮುಕ್ತಿ.. ಉದ್ಯೋಗಸ್ಥರ ಸತ್ವಪರೀಕ್ಷೆಗಳಲ್ಲಿ ವಿಜಯ.  ಬಂಧುವರ್ಗದಲ್ಲಿ ವೈಷಮ್ಯ ನಿವಾರಣೆ. ಗೃಹೋಪಯೋಗಿ ಸಾಮಗ್ರಿಗಳ ದುರಸ್ತಿಗೆ ಧನವ್ಯಯ. ಒಡಹುಟ್ಟಿದವರ ಪ್ರೀತಿಗೆ ಸ್ಪಂದನದಿಂದ ಸೌಖ್ಯ. ಗಣೇಶ ಕವಚ, ದಕ್ಷಿಣಾ ಮೂರ್ತಿ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ:

ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳು. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ. ಗಣೇಶ ಸ್ತೋತ್ರ ವಿಷ್ಣು ಸಹಸ್ರನಾಮ,  ಶನಿಮಹಾತ್ಮೆ ಓದಿ.

ಮೀನ:

ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ವಿಶೇಷ ಸಹಾಯ.. ಸೇವಾ ರೂಪದ ಕಾರ್ಯಗಳು ಮುನ್ನಡೆ ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪುನರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ ಶನಿಮಹಾತ್ಮೆ ಓದಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.