ದಿನ ಭವಿಷ್ಯ: ಇಂದು ಯಾರಿಗೆ ಶುಭ?
Daily Horoscope: ಇಂದು (ಬುಧವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಆನಂದದ ಘಟನೆಗಳ ಸರಮಾಲೆ.. ಅಪೂರ್ವ ಸಾಧನೆ ಮಾಡಿದ ಹೆಗ್ಗಳಿಕೆ. ಈಗಿರುವಲ್ಲೇ ಸುಖಜೀವನದ ಯೋಗ. ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಸರಿಯಾಗಿ ಯೋಚಿಸಿ ಮುನ್ನಡೆಯಿರಿ.. ಕೆಲಸಗಳು ಅರ್ಧದಲ್ಲಿ ನಿಲ್ಲದಂತೆ ನೋಡಿಕೊಳ್ಳಿ. ವ್ಯವಹಾರ ನಿಮಿತ್ತ ಸಣ್ಣ ಪ್ರವಾಸದ ಸಾಧ್ಯತೆ. ಸಂಸಾರದಲ್ಲಿ ಎಲ್ಲರಿಗೂ ಸಮಾಧಾನದ ಅನುಭವ. ಸಣ್ಣ ಉದ್ಯಮಿಗಳಿಗೆ ಮತ್ತು ವ್ಯಾಪಾರಿಗಳಿಗೆ ಶುಭದಿನ. ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ರವಿಸ್ತೋತ್ರ ಓದಿ.
ಮಿಥುನ:
ಕರೆಗಳಿಗೆ ಶೀಘ್ರ ಸ್ಪಂದನದಿಂದ ಒಳಿತು.. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮಗಳ ಆರ್ಥಿಕ ಸ್ಥಿತಿ ಸುಧಾರಣೆ. ಮಹಿಳೆಯರ ನೇತೃತ್ವದ ಗೃಹೋದ್ಯಮಗಳು ಪ್ರಗತಿಯಲ್ಲಿ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.
ಕರ್ಕಾಟಕ:
ಸತ್ವಪರೀಕ್ಷೆಯ ಸನ್ನಿವೇಶಗಳು ಬರಲಿವೆ.. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಬೇಟೆಯ ಪ್ರಯತ್ನ ಸಫಲ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಮಹಿಷಮರ್ದಿನಿ ಸ್ತೋತ್ರ ಓದಿ.
ಸಿಂಹ:
ಅಪೇಕ್ಷೆಗಳು ಸುಲಭದಲ್ಲಿ ಕೈಗೂಡುತ್ತವೆ.. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಬಂಧು ಜನರೊಡನೆ ಸೌಹಾರ್ದಕೂಟ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟದಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಅಷ್ಡಕ, ನರಸಿಂಹ ಕವಚ, ಲಕ್ಷ್ಮೀ ಸ್ತೋತ್ರ ಓದಿ.
ಕನ್ಯಾ:
ಬದುಕಿನ ನಿರ್ಣಾಯಕ ಹಂತಕ್ಕೆ ಪ್ರವೇಶ.. ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ವ್ಯಾಪಾರಿಗಳಿಗೆ ಉತ್ತಮ ಆದಾಯ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಪಂಚರತ್ನ, ವೇದಸಾರ ಶಿವಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.
ತುಲಾ:
ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು.. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ. ಕೇಟರಿಂಗ್ ವ್ಯವಹಾರಸ್ಥರು ಎಚ್ಚರ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದತ್ತಾತ್ರೇಯ ಸ್ತೋತ್ರ ಓದಿ.
ವೃಶ್ಚಿಕ:
ಉದ್ಯೋಗದಲ್ಲಿ ಏರಿಳಿತವಿಲ್ಲದ ಪರಿಸ್ಥಿತಿ.. ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ಹೂವು, ಹಣ್ಣು ವ್ಯಾಪಾರಿಗಳಿಗೆ ಲಾಭ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಧನು:
ಹಿತಶತ್ರುಗಳ ಬಾಧೆಯಿಂದ ಬಿಡುಗಡೆ.. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ. ಕೃಷಿ ಕ್ಷೇತ್ರದ ಪ್ರಯೋಗಗಳಲ್ಲಿ ಮುನ್ನಡೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದೇವೀಸ್ತೋತ್ರ ಓದಿ.
ಮಕರ:
ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ.. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ.. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ.. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಅನುಭವಿಗಳ ಮಾರ್ಗಹ ಕಾರ್ಯಗಳಲ್ಲಿ ಜಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.