ದಿನ ಭವಿಷ್ಯ: ಇಂದು ಯಾರಿಗೆ ಶುಭ ಫಲ?

Daily Horoscope: ಇಂದು (ರವಿವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Nov 29, 2026 - 09:05
Nov 29, 2026 - 09:05
ದಿನ ಭವಿಷ್ಯ: ಇಂದು ಯಾರಿಗೆ ಶುಭ ಫಲ?

ಮೇಷ:

ಸಂತೋಷದಲ್ಲಿ ದಿನ ಕಳೆಯಿರಿ.. ರವಿವಾರದ ವಿರಾಮವನ್ನು ಅನುಭವಿಸಿರಿ. ಉದ್ಯೋಗದ ಚಿಂತೆಗೆ ತಡೆ ಆಜ್ಞೆ. ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ. ಗಣೇಶ ಅಷ್ಟಕ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.

ವೃಷಭ:

ತಡೆಯಿಲ್ಲದ ಪ್ರಗತಿ, ಏಳಿಗೆ.. ಸ್ಥಗಿತವಾದ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ. ಸಂಸಾರದ ಕಡೆಗೆ ಗಮನ. ವ್ಯವಹಾರ ನಿಮಿತ್ತ ಸಣ್ಣ ಪ್ರವಾಸದ ಸಾಧ್ಯತೆ. ಸಂಸಾರದಲ್ಲಿ ಎಲ್ಲರಿಗೂ ಸಮಾಧಾನದ ಅನುಭವ. ಗಣೇಶ ಕವಚ, ವೆಂಕಟೇಶ್ವರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

ಮಿಥುನ:

ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ.. ಸೇವಾ ಹಿರಿತನಕ್ಕೆ ಮಾನ್ಯತೆ. ಉದ್ಯಮದಲ್ಲಿ ಆರ್ಥಿಕ ಮುಗ್ಗಟ್ಟು. ವಿತ್ತಸಂಸ್ಥೆ ನೆರವಿನಿಂದ ಪರಿಹಾರ. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ. ವ್ಯವಹಾರ ನಿಮಿತ್ತ ಪೂರ್ವಕ್ಕೆ  ಪ್ರಯಾಣ. ಗಣೇಶ ಕವಚ, ನರಸಿಂಹ ಸ್ತೋತ್ರ, ಆದಿತ್ಯ ಹೃದಯ ಓದಿ.

ಕರ್ಕಾಟಕ:

ಅಕಸ್ಮಾತ್ ಘಟನೆಗಳಿಂದ ವಿಚಲಿತರಾಗದಿರಿ.. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಅರಸುತ್ತಿರುವವರ ಪ್ರಯತ್ನ ಸಫಲ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ. ಗಣೇಶ ಪಂಚರತ್ನ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಸಿಂಹ:

ನೌಕರ ವರ್ಗಕ್ಕೆ ನೆಮ್ಮದಿಯ ದಿನ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.. ಪರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟದಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.

ಕನ್ಯಾ:

ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ಉಪಕರಣ ವ್ಯಾಪಾರಿಗಳಿಗೆ  ಉತ್ತಮ ಆದಾಯ.. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ತುಲಾ:

ಮುಂದೇನಾಗುವುದೆಂಬ ಅಂಜಿಕೆ ಬೇಡ.. ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಪ್ರಕೃತಿಯ ಒಲುಮೆಯಿಂದ ಸುಖ-ಶಾಂತಿ. ಗಣೇಶ ದ್ವಾದಶನಾಮ ಸ್ತೋತ್ರ,  ವೇದಸಾರ ಶಿವಸ್ತೋತ್ರ,  ಹನುಮಾನ್ ಚಾಲೀಸಾ ಓದಿ.

ವೃಶ್ಚಿಕ: 

ಬದುಕಿನಲ್ಲಿ ಹಂತಹಂತದ ಅಭಿವೃದ್ಧಿ.. ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.

ಧನು:

ಎಲ್ಲಾ ಬಗೆಯ ಬಾಧೆಗಳಿಂದ  ಬಿಡುಗಡೆ.. ಕಳೆದ ಸಪ್ತಾಹದ ಸಿಹಿನೆನಪುಗಳ ಮೆಲುಕು. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ. ಕೃಷಿ ಕ್ಷೇತ್ರಕ್ಕೆ ಹೊಸ ನೀರಿನ ಆಸರೆ. ಗಣೇಶ ದ್ವಾದಶನಾಮ ಸ್ತೋತ್ರ, ಕಾರ್ತಿಕೇಯ ಸ್ತೋತ್ರ ಮಹಿಷಮರ್ದಿನಿ ಸ್ತೋತ್ರ ಓದಿ.

ಮಕರ:

ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ.. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಪಂಚರತ್ನ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ಕುಂಭ:

ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ.. ವ್ಯವಹಾರದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಗಣಪತಿ ಅಥರ್ವಶೀರ್ಷ,ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.

ಮೀನ: 

ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ.. ಉದ್ಯೋಗದಲ್ಲಿ ಯಶಸ್ಸು. ಸಮಾಜದ ಹಿರಿಯರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಹಿರಿಯ ಆಶೀರ್ವಾದದಿಂದ ಕಾರ್ಯಗಳಲ್ಲಿ ಜಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.